ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೂವರು ಸಾಧಕರಿಗೆ ರಂಗ ಪುರಸ್ಕಾರ ಇಂದು ಪ್ರದಾನ

Published 27 ಜೂನ್ 2024, 5:09 IST
Last Updated 27 ಜೂನ್ 2024, 5:09 IST
ಅಕ್ಷರ ಗಾತ್ರ

ಕೊಪ್ಪಳ: ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕವಿಸಮಯ ಹಾಗೂ ಇಲ್ಲಿನ ಬಹುತ್ವ ಬಳಗ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಸಿಜಿಕೆ ರಂಗ ಪುರಸ್ಕಾರಕ್ಕೆ ಜಿಲ್ಲೆಯ ಮೂವರು ಕಲಾವಿದರು ಆಯ್ಕೆಯಾಗಿದ್ದಾರೆ.

ಹಿರಿಯ ರಂಗಕರ್ಮಿ ಸಿಜಿಕೆ ಅವರ ನೆನಪಿನಲ್ಲಿ ಪ್ರತಿ ವರ್ಷ ಅವರ ಜನ್ಮದಿನದಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಇದರ ಅಂಗವಾಗಿ ರಂಗಪುರಸ್ಕಾರ ನೀಡಲಾಗುತ್ತದೆ. ರಂಗಚಟುವಟಿಕೆಯಲ್ಲಿ ತೊಡಗಿರುವ ಕೊಪ್ಪಳದ ಶೀಲಾ ಹಾಲ್ಕುರಿಕೆ (2021), ಶರಣು ಶೆಟ್ಟರ್ (2022) ಮತ್ತು ಲಕ್ಷ್ಮಣ ಪೀರಗಾರ (2023) ಅವರನ್ನು ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಗುರುವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಆಗ ಪ್ರಶಸ್ತಿ ಪ್ರದಾನ ನಡೆಯಲಿದೆ. ನಾಟಕ ಅಕಾಡೆಮಿ ಸದಸ್ಯ ಚಾಂದ್‌ಪಾಷಾ ಕಿಲ್ಲೇದಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಶರಣು ಶೆಟ್ಟರ್
ಶರಣು ಶೆಟ್ಟರ್
ಲಕ್ಷ್ಮಣ ಪೀರಗಾರ
ಲಕ್ಷ್ಮಣ ಪೀರಗಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT