ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನಾತಕೋತ್ತರ ಕೋರ್ಸ್‌ ಆರಂಭಿಸಿ- ಸಚಿವ ಹಾಲಪ್ಪ ಆಚಾರಗೆ ಎಸ್‌ಎಫ್‌ಐ ಮನವಿ ಸಲ್ಲಿಕೆ

Last Updated 23 ಅಕ್ಟೋಬರ್ 2021, 7:16 IST
ಅಕ್ಷರ ಗಾತ್ರ

ಕೊಪ್ಪಳ:ಕೊಪ್ಪಳ ಮತ್ತು ಯಲಬುರ್ಗಾದ ಸ್ನಾತಕೋತ್ತರ ಕೇಂದ್ರದಲ್ಲಿ ಕೆಲವು ಕೋರ್ಸ್‌ಗಳನ್ನುಕೈಬಿಟ್ಟಿರುವುದು ಸರಿಯಲ್ಲ ಮತ್ತು ಅವುಗಳನ್ನು ಪುನರ್‌ ಆರಂಭಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಒಕ್ಕೂಟಸಚಿವ ಹಾಲಪ್ಪ ಆಚಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತು.

ಪ್ರಸ್ತುತ 2021-22 ರ ಶೈಕ್ಷಣಿಕ ಅವಧಿಯಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಯು ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿದ್ದು ವಿಶ್ವವಿದ್ಯಾಲಯದ ವ್ಯಾಪ್ತಿಯ ಕೊಪ್ಪಳ ಮತ್ತು ಯಲಬುರ್ಗಾ ಸ್ನಾತಕೋತ್ತರ ಕೇಂದ್ರದಲ್ಲಿ ಇಲ್ಲಿವರೆಗೂ ಇದ್ದ ಎಂ.ಎ, ಪತ್ರಿಕೋದ್ಯಮ, ಕನ್ನಡ, ಎಂ.ಎಸ್,ಡಬ್ಲ್ಯೂ, ಯಲಬುರ್ಗಾದಲ್ಲಿ ರಾಜ್ಯಶಾಸ್ತ್ರ, ಇಂಗ್ಲಿಷ್, ಇತಿಹಾಸ ಮತ್ತು ಪುರಾತತ್ವ, ಅರ್ಥಶಾಸ್ತ್ರ ಕೋರ್ಸ್‌ಗಳನ್ನು ಈ ಶೈಕ್ಷಣಿಕ ವರ್ಷದ ಪ್ರವೇಶಾತಿಯಲ್ಲಿ ಕೈ ಬಿಟ್ಟಿರುವುದು ಖಂಡನೀಯ.

ಈ ಭಾಗದ ಅನೇಕ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಇಲ್ಲಿನಕೇಂದ್ರ ಬಿಟ್ಟು ಬೇರೆ ಕಡೆ ಹೋಗಿ ಕಲಿಯಲು ವಿದ್ಯಾರ್ಥಿಗಳಿಗೆ ಊಟ, ವಸತಿ, ಆರ್ಥಿಕ ತೊಂದರೆ ಕಾಡುತ್ತದೆ. ಈ ಭಾಗದ ಅಭಿವೃದ್ಧಿಗಾಗಿ ಉನ್ನತ ಶಿಕ್ಷಣ ಕಲಿಯುವವರ ಸಂಖ್ಯೆ ಕಡಿಮೆ ಇದ್ದು, ಆ ಸಂಖ್ಯೆ ಹೆಚ್ಚಳ ಮಾಡಬೇಕೆಂಬ ಸರ್ಕಾರದ ಮೂಲ ಉದ್ದೇಶಕ್ಕೆವಿವಿ ಉಪಕುಲಪತಿಗಳು ಕೋರ್ಸ್‌ ಕೈ ಬಿಡುವುದರ ಮೂಲಕ ಉನ್ನತ ಶಿಕ್ಷಣಕ್ಕೆ ಎಳ್ಳುನೀರು ಬಿಟ್ಟಂತಾಗಿದೆ ಎಂದು ಸಂಘಟನೆಯ ಮುಖಂಡರು ದೂರಿದರು.

ಪ್ರಸ್ತುತ ವರ್ಷದಲ್ಲಿ ನೂರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಕಲಿಯಲು ಕನಸು ಕಾಣುತ್ತಿದ್ದು ಅವರಿಗೆ ನಿರಾಶೆ ಮಾಡದೆ, ಇದೆ ಶೈಕ್ಷಣಿಕ ವರ್ಷದಲ್ಲಿ ಕೊಪ್ಪಳ ಮತ್ತು ಯಲಬುರ್ಗಾ ಸ್ನಾತಕೋತ್ತರ ಕೇಂದ್ರದಲ್ಲಿ ಕೈಬಿಟ್ಟು ಕೋರ್ಸುಗಳನ್ನು ಪುನಃ ಸೇರ್ಪಡೆ ಮಾಡಿ ಮುಂದುವರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರಅವರಿಗೆ ಮನವಿ ಸಲ್ಲಿಸಲಾಯಿತು. ಎಸ್ಎಫ್‌ಐರಾಜ್ಯ ಅಧ್ಯಕ್ಷ ಅಮರೇಶ ಕಡಗದ, ಜಿಲ್ಲಾ ಕಾರ್ಯದರ್ಶಿ ಸಿದ್ದಪ್ಪ ಎಂ, ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹಾಗೂ ವೈ.ಬಿ. ಬಂಡಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT