ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರೂಣ ಹತ್ಯೆ ತಡೆಯಲು ರಾಜ್ಯ ಸರ್ಕಾರ ವಿಫಲ: ಹೇಮಲತಾ ನಾಯಕ ಆರೋಪ

Published 2 ಜೂನ್ 2024, 14:16 IST
Last Updated 2 ಜೂನ್ 2024, 14:16 IST
ಅಕ್ಷರ ಗಾತ್ರ

ಕೊಪ್ಪಳ: ‘ರಾಜ್ಯದಲ್ಲಿ ಮೇಲಿಂದ ಮೇಲೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಇವುಗಳನ್ನು ತಡೆಯಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ವಿಧಾನಪರಿಷತ್‌ ಸದಸ್ಯೆ ಬಿಜೆಪಿಯ ಹೇಮಲತಾ ನಾಯಕ ಆರೋಪಿಸಿದರು.

ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯ ಸರ್ಕಾರ ಸಮಾನತೆ ವಿಚಾರದಲ್ಲಿ ನಿರ್ಲಕ್ಷ್ಯ ಮನೋಭಾವನೆ ಹೊಂದಿದೆ. ಈ ಕೃತ್ಯದಲ್ಲಿ ತೊಡಗಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೆಣ್ಣು ಮಕ್ಕಳಿಗೆ ಗ್ಯಾರಂಟಿಗಳನ್ನು ನೀಡುತ್ತಿರುವ ಸರ್ಕಾರ ಭ್ರೂಣ ಹತ್ಯೆ ತಡೆಯುವ ಮತ್ತು ಹೆಣ್ಣುಮಕ್ಕಳ ಸುರಕ್ಷಿತ ಜೀವನಕ್ಕೆ ಯಾಕೆ ಗ್ಯಾರಂಟಿ ಕೊಡುತ್ತಿಲ್ಲ’ ಎಂದು ಪ್ರಶ್ನಿಸಿದರು.

‘ಪ್ರಸ್ತುತ ದಿನಮಾನಗಳಲ್ಲಿ ಲಿಂಗ ತಾರತಮ್ಯ ವ್ಯಾಪಕವಾಗಿದ್ದು, ಹೆಣ್ಣು ಭ್ರೂಣ ಹತ್ಯೆ ಎಲ್ಲರೂ ತಲೆ ತಗ್ಗಿಸುವ ಪ್ರಕರಣವಾಗಿದ್ದು ಇದರಲ್ಲಿ ಆಡಳಿತ ವೈಫಲ್ಯ ಎದ್ದು ಕಾಣುತ್ತದೆ’ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನ್‌ ಗುಳಗಣ್ಣನವರ ಮಾತನಾಡಿ ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡುವ ಮೂಲಕ ನೇರವಾಗಿ ಸರ್ಕಾರದ ಖಜಾನೆಗೆ ಕೈ ಹಾಕಲಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಬಿ. ನಾಗೇಂದ್ರ ಸಂಪುಟದಿಂದ ವಜಾ ಮಾಡಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT