ಮಂಗಳವಾರ, ಮೇ 17, 2022
26 °C

ಮುರಡಿ ತಾಂಡಾ: ಮೇವಿನ ಬಣವೆ ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುರಡಿ (ಯಲಬುರ್ಗಾ): ತಾಲ್ಲೂಕಿನ ಮುರಡಿ ತಾಂಡಾದ ಹೊರ ವಲಯದಲ್ಲಿ ಭಾನುವಾರ ಮಧ್ಯಾಹ್ನ ನೇಮಪ್ಪ ಯಮನಪ್ಪ ಕಳ್ಳೊಳ್ಳಿ ಎಂಬುವವರಿಗೆ ಸೇರಿದ ಬಣವೆ ಬೆಂಕಿಗೆ ಆಹುತಿಯಾಗಿದೆ.

‘ಕಿಡಿಗೇಡಿಗಳು ಮೇವಿನ ಬಣವೆಗೆ ಬೆಂಕಿ ಹಚ್ಚಿದ್ದಾರೆ. ₹1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮೇವು ಸುಟ್ಟಿದೆ’ ಎಂದು ರೈತ ತಿಳಿಸಿದರು.

‘ಬೆಂಕಿ ಹೊತ್ತಿಕೊಂಡ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುವಷ್ಟರಲ್ಲಿ ಮೇವು ಬಹುತೇಕ ಸುಟ್ಟು ಹೋಯಿತು. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಲಿದೆ. ಸರ್ಕಾರ ಪರಿಹಾರ ನೀಡಬೇಕು’ ಎಂದು ನೇಮಪ್ಪ ಆಗ್ರಹಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು