ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಯಿರಿ

ಯಲಬುರ್ಗಾ: ಪರಿಶಿಷ್ಟರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿ ಮಾನವ ದಿನಗಳನ್ನು 200ಕ್ಕೆ ಹೆಚ್ಚಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಎಸ್‍ಎಫ್‍ಐ ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಸೋಮವಾರ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಅವರು,‘ಹಿಂದುಳಿದ ವರ್ಗಗಳ ಹಕ್ಕುಗಳ ಸಂರಕ್ಷಣೆಯಲ್ಲಿ ಸರ್ಕಾರ ವಿಶೇಷ ಕಾಳಜಿ ತೋರಬೇಕು. ಗ್ರಾಮೀಣ ಆರೋಗ್ಯ ಸುಧಾರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ರೈತರಿಗೆ ಮಾರಕವಾದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಬಾರದು ಹಾಗೂ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಸಂಕಷ್ಟದಲ್ಲಿರುವ ನಾಡಿನ ಜನರ ಹಿತ ಕಾಪಾಡಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.
ಕೊಲೆಯಾದ ಅನಿಲ್ ಇಂಗಳಗಿ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡಬೇಕು. ನಿರುದ್ಯೋಗಿ ಯುವಕರಿಗೆ ಉದ್ಯೋಗದ ಜತೆಗೆ ಗೌರವಧನ ನೀಡಬೇಕು. ಅತಿಥಿ ಉಪನ್ಯಾಸಕ ಹಾಗೂ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಬೇಕು. ಲಾಕ್‍ಡೌನ್ ಸಮಯದಲ್ಲಿ ತೀವ್ರ ತೊಂದರೆ ಅನುಭವಿಸಿದ ಬಡಕುಟುಂಬಕ್ಕೆ 6 ತಿಂಗಳ ಮಾಸಿಕ ಗೌರವಧನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕು ಸಂಚಾಲಕ ಎಂ. ಸಿದ್ದಪ್ಪ, ಮುಖಂಡ ಬಾಲರಾಜ್ ದೊಡ್ಡಮನಿ, ಸಂಚಾಲಕ ಅಬ್ದಲ್ ರಜಾಕ, ಮುದಿಯಪ್ಪ, ಹನಮಂತಪ್ಪ, ಶಿವಕುಮರ ಯಮನೂರಪ್ಪ, ಶಂಕರ, ಮಂಜುನಾಥ, ಹನಮೇಶ ಹಾಗೂ ಮಹಾಂತೇಶ ಇದ್ದರು.
ಉಪತಹಶೀಲ್ದಾರ ನಾಗಪ್ಪ ಸಜ್ಜನ್ ಮನವಿ ಸ್ವೀಕರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.