ಅಳವಂಡಿ: ಗ್ರಾಮೀಣ ಭಾಗದಲ್ಲಿ ಇನ್ನೂ ಜಾರಿಯಲ್ಲಿರುವ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ, ಲಿಂಗ ತಾರತಮ್ಯ ಮುಂತಾದ ಅನಿಷ್ಟ ಪದ್ದತಿಗಳನ್ನು ತೊಡೆದು ಹಾಕಲು ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಹಾಗೂ ಸರ್ವರ ಸಹಕಾರ ಅಗತ್ಯ ಎಂದು ಪಿಡಿಒ ಕೊಟ್ರಪ್ಪ ಅಂಗಡಿ ಹೇಳಿದರು.

ಇಲ್ಲಿಯ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಅಧ್ಯಕ್ಷೆ ಶಂಕ್ರಮ್ಮ ಜೋಗಿನ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

‘ಪಾಲಕರಲ್ಲಿ ಶಿಕ್ಷಣದ ಕೊರತೆ ಮಕ್ಕಳನ್ನು ಶಿಕ್ಷಣದಿಂದ ವಂಚಿತ ಹಾಗೂ ಬಾಲ್ಯ ವಿವಾಹಕ್ಕೆ ದೂಡುತ್ತಿವೆ. ಕಾರಣ ಪಾಲಕರಲ್ಲಿ ಹಾಗೂ ಸಮಾಜಕ್ಕೆ ಈ ಅನಿಷ್ಟ ಪದ್ದತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು’ ಎಂದರು.

ಅಂಗನವಾಡಿ ಮೇಲ್ವಿಚಾರಕಿ ತೆಹಮತ್‌ಬೀ ಮಾತನಾಡಿ, ಬಾಲ್ಯ ವಿವಾಹ ಮಾಡುವದರಿಂದ ಹೆಣ್ಣು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ’ ಎಂದರು.

ಗ್ರಾ.ಪಂ ಉಪಾಧ್ಯಕ್ಷೆ ಶಾರಮ್ಮ ಇಳಿಗೇರ, ಪ್ರಾಚಾರ್ಯ ಅಶೋಕ ಕೊಣ್ಣೂರ, ಸಿಆರ್‌ಪಿ ವಿಜಯಕುಮಾರ ಟಿಕಾರೆ, ಕಾರ್ಯದರ್ಶಿ ಬಸವರಾಜ, ಪ್ರಮುಖರಾದ ನಾಗರಾಜ ನವನಳ್ಳಿ, ನೀಲಪ್ಪ ಹಕ್ಕಂಡಿ, ಹನುಮಂತ ಲಮಾಣಿ, ರವೀಂದ್ರ ಕಮ್ಮಾರ, ಸುರೇಶ ವಡ್ಡರ, ಮಲ್ಲಪ್ಪ ಬೆಣಕಲ್, ಅನ್ನಪೂರ್ಣ, ದೇವೆಂದ್ರರಡ್ಡಿ ಹಾಗೂ ಆಶಾ ಕಾರ್ಯಕರ್ತೆಯರು, ಮಹಿಳೆಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.