ಕೊಪ್ಪಳ: ಜಿಲ್ಲೆಯಲ್ಲಿ ದಾಖಲಾಗುವ ಫೋಕ್ಸೊ ಪ್ರಕರಣಗಳಲ್ಲಿ ಬಾಲ್ಯವಿವಾಹದಂಥ ಘಟನೆಗಳೂ ಇದ್ದು, ಘಟನಾ ನಂತರ ಫೋಕ್ಸೊ ದಾಖಲಿಸುವುದರೊಂದಿಗೆ ಪ್ರಕರಣಗಳು ನಡೆಯದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಈಚೆಗೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ‘ಫೋಕ್ಸೊ ಪ್ರಕರಣಗಳಲ್ಲಿ ಬಾಲಕಿ ಮೇಲೆ ಮಾತ್ರವಲ್ಲ, ಬಾಲ್ಯವಿವಾಹದ ಪ್ರಕರಣಗಳಲ್ಲಿಯೂ ಫೋಕ್ಸೊ ಪ್ರಕರಣ ದಾಖಲಿಸಬಹುದು. ಆದ್ದರಿಂದ ಶಾಲಾ ಮಕ್ಕಳಿಗೆ ಬಾಲ್ಯವಿವಾಹ, ಅದರಿಂದಾಗುವ ದುಷ್ಪರಿಣಾಮಗಳು ಹಾಗೂ ಅದರಿಂದ ಆಗುವ ಸಾಮಾಜಿಕ, ಕೌಟುಂಬಿಕ ಮತ್ತು ಆರೋಗ್ಯದ ಪರಿಣಾಮಗಳ ಬಗ್ಗೆ ಪ್ರತಿ ಶಾಲೆಯಲ್ಲಿಯೂ ಮಕ್ಕಳಿಗೆ ಅರಿವು ಮೂಡಿಸಬೇಕು’ ಎಂದರು.

‘ಗ್ರಾಮಗಳಲ್ಲಿ ನಡೆಯುವ ಮಕ್ಕಳ ಗ್ರಾಮಸಭೆ, ವಿವಿಧ ಕಾರ್ಯಕ್ರಮಗಳಲ್ಲಿ ಮಕ್ಕಳು ಹಾಗೂ ಪೋಷಕರನ್ನು ಕೇಂದ್ರೀಕರಿಸಿ ಅವರಿಗೆ ಬಾಲ್ಯವಿವಾಹ, ಸಣ್ಣ ವಯಸ್ಸಿನ ಗರ್ಭಧಾರಣೆಯ ತೊಡಕುಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಬೇಕು. ಪ್ರೌಢಶಾಲೆಗಳಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆ ಇದ್ದು, ಫೋಕ್ಸೊ ಪ್ರಕರಣಗಳನ್ನು ನಿಯಂತ್ರಿಸಲು ಅಗತ್ಯವಿರುವ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು’ ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

‘ಬಾಲ್ಯವಿವಾಹದ ಕುರಿತು ನಿಗಾ ವಹಿಸಲು ಜಿಲ್ಲೆಯ ಪ್ರತಿ ಶಾಲೆಯಲ್ಲಿಯೂ ಯಾವುದೇ ವಿದ್ಯಾರ್ಥಿ ಸತತ 7 ದಿನ ಶಾಲೆಗೆ ಗೈರಾದರೆ ಆ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಮಕ್ಕಳ ಕಲ್ಯಾಣ ಸಮಿತಿ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಾಹಿತಿ ನೀಡಬೇಕು. ಇದರಿಂದ ಕೇವಲ ಬಾಲ್ಯವಿವಾಹ ಮಾತ್ರವಲ್ಲ ಬಾಲಕಾರ್ಮಿಕ ಪದ್ದತಿಯಿಂದ ಮಕ್ಕಳನ್ನು ರಕ್ಷಿಸಬಹುದು. ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿಗೆ ಬರುವ ಕರೆಯನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲಕಾರಿ ರಾಮಪ್ಪ ಒಡೆಯರ್ ಅವರು ಮಾತನಾಡಿ ‘ಇತ್ತೀಚೆಗೆ ಜಿಲ್ಲೆಯ ಕೆಲವು ಅಂಗನವಾಡಿಗಳಿಗೆ ದಿಢೀರ್ ಭೇಟಿ ನೀಡಲಾಗಿತ್ತು. ಆ ಸಂದರ್ಭ ಕೆಲವು ಅಂಗನವಾಡಿಗಳಲ್ಲಿ ಮಕ್ಕಳ ಹಾಜರಾತಿ ಸರಿಯಾಗಿ ನಿರ್ವಹಿಸದಿರುವುದು ಕಂಡುಬಂದಿತು. ಆದ್ದರಿಂದ ಎಲ್ಲ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ನಿಯಮಿತವಾಗಿ ನಿಮ್ಮ ವ್ಯಾಪ್ತಿಯ ಅಂಗನವಾಡಿಗಳಿಗೆ ಭೇಟಿ ನೀಡಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಎಸ್.ಪಿ. ಹೇಮಂತ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆಯ ನಿರೂಪಣಾಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ನಿಲೋಫರ್ ರಾಂಪುರಿ, ಯುನಿಸೆಫ್‌ನ ಹರೀಶ್ ಜೋಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು, ಸಿಡಿಪಿಒಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

- 98 ಪ್ರಕರಣಗಳ ವಿಚಾರಣೆ ಬಾಕಿ

2024-25ನೇ ಸಾಲಿನಲ್ಲಿ ಪ್ರಾರಂಭಿಕ 103 ಫೋಕ್ಸೊ ಪ್ರಕರಣಗಳು ಸೇರಿದಂತೆ ಮೊದಲ ತ್ರೈಮಾಸಿಕದಲ್ಲಿ 17 ಪ್ರಕರಣಗಳು ದಾಖಲಾಗಿದೆ. ಅವುಗಳಲ್ಲಿ 20 ಖುಲಾಸೆಯಾಗಿದ್ದು 2 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. 98 ಪ್ರಕರಣಗಳು ವಿವಿಧ ಹಂತಗಳಲ್ಲಿ ಬಾಕಿ ಇವೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಮಾಹಿತಿ ನೀಡಿದರು. ಮೊದಲ ಮೂರು ತಿಂಗಳ ಅವಧಿಯಲ್ಲಿ ಕೊಪ್ಪಳ ತಾಲ್ಲೂಕಿನಲ್ಲಿ 21 ಗಂಗಾವತಿ 5 ಕನಕಗಿರಿ 7 ಕುಷ್ಟಗಿ 15 ಯಲಬುರ್ಗಾ 8 ತಡೆಯಾಜ್ಞೆ ಮೂಲಕ 2 ಹಾಗೂ ಬೇರೆ ಜಿಲ್ಲೆಯ ಪ್ರಕರಣಗಳಲ್ಲಿ 2 ಸೇರಿದಂತೆ ಒಟ್ಟು 60 ಮಕ್ಕಳನ್ನು ಬಾಲ್ಯವಿವಾಹದಿಂದ ರಕ್ಷಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.