ಭಾನುವಾರ, ಡಿಸೆಂಬರ್ 4, 2022
20 °C

ಉತ್ತಮ ಸೇವೆ ನೀಡಲು ಶ್ರಮಿಸಿ: ಸುಂದರೇಶಬಾಬು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿ’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ನೌಕರರಿಗೆ ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ‘ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಮಹನೀಯರು ಪ್ರಾಣ ಬಲಿದಾನ ಮಾಡಿದ್ದಾರೆ. ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಲಭಿಸಿದೆ. ಕೋವಿಡ್‌ ಸಂದರ್ಭದಲ್ಲಿಯೂ ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದೀರಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಸ್ಯ ಸಂತೆಗೆ ಚಾಲನೆ: ಸಚಿವೆ ಶಶಿಕಲಾ ಜೊಲ್ಲೆ ನಗರದ ತೋಟಗಾರಿಕಾ ಕಚೇರಿಯ ಆವರಣದಲ್ಲಿ ಆಯೋಜನೆಯಾಗಿರುವ ಸಸ್ಯ ಸಂತೆ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿದರು. ಈ ಮೇಳ ಐದು ದಿನ ಜರುಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು