ಕನಕಗಿರಿ: ‘ಸರ್ಕಾರಿ ಆಸ್ತಿ ಸಂರಕ್ಷಣೆಗೆ ಶಾಲೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸಹಕಾರ ನೀಡಲಾಗುವುದು’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ರಮೇಶ ನಾಯಕ ಹುಲಿಹೈದರ ತಿಳಿಸಿದರು.

ತಾಲ್ಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಸಮಾಜ ಹಾಗೂ ದೇಶಕ್ಕೆ ಕೀರ್ತಿ ತರುವ ಕೆಲಸ ಮಾಡಬೇಕು. ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಹವ್ಯಾಸಗಳನ್ನು ಬೆಳಸಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಗದೀಶಪ್ಪ ಗದ್ದಿ ಮಾತನಾಡಿ,‘ಪ್ರತಿಯೊಬ್ಬರು ಶಿಕ್ಷಣದ ಮಹತ್ವ ಅರಿತುಕೊಂಡು ಅಧ್ಯಯನ ಮಾಡಬೇಕು ಎಂದರು.

ಮುಖ್ಯಶಿಕ್ಷಕ ಬಾಲಾಜಿ ಸೂಳೇಕಲ್, ಕೆಡಿಪಿ ಮಾಜಿ ಸದಸ್ಯ ಗುರುನಗೌಡ ಮಾತನಾಡಿದರು.

ಇದೇ ಸಂದರ್ಭದಲ್ಲಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಥ್ರೋ ಬಾಲ್ ಆಟಗಾರರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜಾ ಅಮರ ನಾಯಕ, ಗ್ರಾಮ ಪಂಚಾಯಿತಿಯ ಸದಸ್ಯರಾದ ಶಿವಪುತ್ರಪ್ಪ, ಸಾವಿತ್ರಮ್ಮ ದುರ್ಗಪ್ಪ , ಗ್ರಾಮದ ಮುಖಂಡರಾದ ಗೋಸ್ಲೆಪ್ಪ ಗದ್ದಿ, ಹನುಮೇಶ ನಾಮಸೇವೆ, ಕಂಠೆಪ್ಪ ಸಿರವಾರ, ಕನಕಪ್ಪ ಪೂಜಾರ, ದುರುಗಪ್ಪ ಹರಿಜನ, ಕರ್ನಾಟಕ ರಾಜ್ಯ ನೌಕರರ ಸಂಘದ ನಿರ್ದೇಶಕ ಶಾಮಮೂರ್ತಿ ಹಾಗೂ ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.