ಗುರುವಾರ , ಆಗಸ್ಟ್ 11, 2022
27 °C

ವಿದ್ಯಾರ್ಥಿಗಳ ಪ್ರತಿಭಟನೆಗೆ ಸ್ಪಂದನೆ: ಗ್ರಾಮಗಳಿಗೆ ಬಂತು ಬಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನುಮಸಾಗರ (ಕೊಪ್ಪಳ ಜಿಲ್ಲೆ): ಕುಷ್ಟಗಿ ತಾಲ್ಲೂಕಿನ ಕೋನಾಪುರ ಮತ್ತು ಪರಮನಹಟ್ಟಿ ಗ್ರಾಮಗಳ ವಿದ್ಯಾರ್ಥಿಗಳು ಬಸ್‌ ಸೌಲಭ್ಯಕ್ಕೆ ಒತ್ತಾಯಿಸಿ ಶುಕ್ರವಾರ ನಡೆಸಿದ ಪ್ರತಿಭಟನೆಗೆ ಸ್ಪಂದನೆ ಸಿಕ್ಕಿದ್ದು, ಶನಿವಾರ ಬಸ್‌ ಸಂಚಾರ ಸೇವೆ ಆರಂಭಗೊಂಡಿತು.

ಗ್ರಾಮಗಳಿಗೆ ಬಸ್‌ ಬರುತ್ತಿದ್ದಂತೆ ವಿದ್ಯಾರ್ಥಿಗಳು ಸಂಭ್ರಮಿಸಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು.

‘ಬಸ್‌ ಸೌಲಭ್ಯವಿಲ್ಲದೇ ನಿತ್ಯ 4 ಕಿ.ಮೀ ನಡೆದು ಹೋಗಬೇಕಿತ್ತು. ಸಮಸ್ಯೆಯನ್ನು ಮನಗಾಣಿಸಲು ಪ್ರತಿಭಟಿಸಿದ್ದೆವು. ಈಗ ಬಸ್ ಸಂಚಾರ ಆರಂಭಗೊಂಡಿದ್ದು, ಖುಷಿ ತಂದಿದೆ’ ಎಂದು ವಿದ್ಯಾರ್ಥಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು