ತಾವರಗೇರಾ: ವಿದ್ಯಾರ್ಥಿಗಳು ಉತ್ತಮ ಕಲಿಕೆಯೊಂದಿಗೆ ತೇರ್ಗಡೆಯಾಗಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದರೆ ಶಾಲೆ, ಶಿಕ್ಷಕರು ಮತ್ತು ಪೋಷಕರಿಗೆ ಸಂತೋಷ. ಆದ್ದರಿಂದ ಪ್ರತಿಯೊಬ್ಬರು ಪ್ರತಿ ನಿತ್ಯ ಓದುವದು, ಪಠ್ಯವನ್ನು ಮನದಟ್ಟಾಗಿ ಕೇಳುವದು ಮುಖ್ಯ. ಸದ್ಯ ಮುಂದಿನ ವಿದ್ಯಾಭ್ಯಾಸಕ್ಕೆ ಹೋಗುವ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಸಂಸ್ಥೆ ಉಪಾಧ್ಯಕ್ಷ ಮಲ್ಲನಗೌಡ ಓಲಿ ಹೇಳಿದರು.

ಸ್ಥಳೀಯ ಸರ್ ಎಂ. ವಿಶ್ವೇಶ್ವರಯ್ಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲಕಿಯರ ಸರ್ಕಾರಿ ಪಪೂ ಕಾಲೇಜು ಪ್ರಾಚಾರ್ಯ ಎಸ್. ಎಸ್. ಪೋರೆ ಸಮಾರಂಭವನ್ನು ಉದ್ಘಾಟಿಸಿದರು. ತಾವರಗೇರಾ ಶಿಕ್ಷಕರ ತರಬೇತಿ ಸಂಸ್ತೆಯ ಪ್ರಾಚಾರ್ಯ ರಂಗನಾಥ ಅಂಬಿಗೇರ ವಿಶೇಷ ಆಹ್ವಾನಿತರಾಗಿ ಪರೀಕ್ಷೆ ತಯಾರಿ, ಸ್ಪರ್ಧಾತ್ಮಕ ಪರೀಕ್ಷೆ, ವಿದ್ಯಾರ್ಥಿಗಳ ಜೀವನ ಮೌಲ್ಯಗಳ ಕುರಿತು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಕಳೆದ ವರ್ಷ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ನಾರಾಯಣಪ್ಪ ಐಲಿ, ಕೋಶಾಧ್ಯಕ್ಷ ನರಹರಿಯಪ್ಪ, ಶಿವನಗೌಡ ವಿಠಲಾಪೂರ, ಶಿಕ್ಷಕರಾದ ಪ್ರಕಾಸ ಮಳಗಿ, ಅಡಿವೆಪ್ಪ ಮೇಟಿ, ಸಂಗಪ್ಪ, ಪ್ರಾಚಾರ್ಯ ಲಕ್ಷ್ಮಣಸಿಂಗ್ ವಗರನಾಳ ಮತ್ತು ವೆಂಕಟೇಶ ಭೋವಿ, ಉಮಾ ಮಹೇಶ್ವರಿ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.