ಇಲ್ಲಿನ ವಿದ್ಯಾರ್ಥಿಗಳು ನಿತ್ಯ ಬನ್ನಿಕೊಪ್ಪದಲ್ಲಿನ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ರಸ್ತೆ ಸರಿಯಿಲ್ಲದ ಕಾರಣ ಬಸ್‌ಗಳ ಸಂಚಾರ ಬಂದ್ ಆಗಿದ್ದು, ಇದರಿಂದ ವಿದ್ಯಾರ್ಥಿಗಳ ಪರದಾಡುವಂತಾಗಿದೆ. ಸರಿಯಾದ ಸಮಯಕ್ಕೆ ಬಸ್‌ಗಳು ಕೂಡ ಬರುತ್ತಿಲ್ಲ. ಇದರಿಂದ ಶಾಲಾ ಕಾಲೇಜಿಗೆ ತೆರಳಲು ಸಮಸ್ಯೆ ಎದುರಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.