ಮಂಗಳವಾರ, ಮೇ 11, 2021
19 °C
ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರ ಪ್ರತಿಭಟನೆ

ಪದವಿ ಪರೀಕ್ಷೆ ಮುಂದೂಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಎಸ್‌ಕೆಎನ್‌ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪ್ರಾಚಾರ್ಯ ಡಾ.ಎನ್.ಜಿ.ಹೆಬಸೂರ್ ಅವರ ಮೂಲಕ ವಿ.ವಿ. ಕುಲಪತಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಗ್ಯಾನೇಶ್ ಕಡಗದ್ ಮಾತನಾಡಿ,‘ವಿ.ವಿ ವ್ಯಾಪ್ತಿಯ ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ  19 ರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಕೊರೊನಾ ಕಾರಣಕ್ಕೆ ವಸತಿ ನಿಲಯಗಳು ಮುಚ್ಚಿವೆ. ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಬಸ್‌ ಸೌಲಭ್ಯ ಇಲ್ಲ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುತ್ತಾರೆ. ಆದ್ದರಿಂದ ಪರೀಕ್ಷೆಗಳನ್ನು ಮುಂದೂಡಬೇಕು’ ಎಂದರು.

‘ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ. ಏ.25 ರಂದು ಕೆ–ಸೆಟ್ ಪರೀಕ್ಷೆಯೂ ನಡೆಯಲಿದೆ. ಅದೇ ದಿನ ಸ್ನಾತಕೋತ್ತರ ಪರೀಕ್ಷೆಗಳಿವೆ. ವಿದ್ಯಾರ್ಥಿಗಳು ಎರಡರಲ್ಲಿ ಯಾವ ಪರೀಕ್ಷೆ ಬರೆಯಬೇಕು ಎಂಬ ಗೊಂದಲದಲ್ಲಿದ್ದಾರೆ. ಹಾಗಾಗಿ ಬಳ್ಳಾರಿ ವಿ.ವಿ. ವ್ಯಾಪ್ತಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಪ್ರಮುಖರಾದ ಹನುಮಂತ ಮುಕ್ಕುಂಪಿ, ಹನುಮೇಶ, ಶಿವಕುಮಾರ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.