ಯಲಬುರ್ಗಾ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾಂರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಪದವಿ ನಿರುದ್ಯೋಗಿಗಳಿಗೆ ವರದಾನವಾಗಿದೆ. ನೋಂದಣಿ ಮಾಡಿಕೊಂಡು ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ ಕೊರ್ಲಳ್ಳಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಯುವನಿಧಿ ಗ್ಯಾರಂಟಿ ಯೋಜನೆಯಿಂದ ಸರ್ಕಾರ ಘೋಷಿಸಿರುವ ಆರ್ಥಿಕ ನೆರವು ನೀಡಲಿದ್ದು, 2023-24ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ನೋಂದಾಯಿಸಿಕೊಂಡು ಪ್ರತಿ ತಿಂಗಳಿಗೆ ₹ 3 ಸಾವಿರ ಹಾಘೂ ಡಿಪ್ಲೊಮಾ ಪಾಸಾದವರಿಗೆ ಮಾಸಿಕ ₹ 1500 ಆರ್ಥಿಕ ನೆರವು ದೊರೆಯಲಿದೆ. ಯುವಕರು ಅದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಚಾರ್ಯ ಕೆ.ಎಚ್. ಛತ್ರದ ಮಾತನಾಡಿ, ‘ಪದವಿ ನಂತರ ಯುವಜನರು ಆರ್ಥಿಕ ತೊಂದರೆ ಎದುರಿಸಬಾರದು ಎಂಬ ಕಾರಣಕ್ಕೆ ಪದವೀಧರರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಅನೇಕರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಪುಸ್ತಕ ಖರೀದಿಸಲು ಹಾಗೂ ಇನ್ನಿತರ ಅನುಕೂಲಕ್ಕೆ ಸಹಾಯವಾಗುತ್ತಿದೆ. ನೋಂದಣಿ ಮಾಡಿಕೊಳ್ಳದೇ ಇರುವವರು ತ್ವರಿತವಾಗಿ ನೋಂದಾಯಿಸಿಕೊಂಡು ಯೋಜನೆಯ ಲಾಭ ಪಡೆದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿ ಕಾರ್ಯದರ್ಶಿ ಮಲ್ಲು ಜಕ್ಕಲಿ, ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಶಿವಯೋಗಿ ಹೊಸಳ್ಳಿ ಮಾತನಾಡಿ, ‘ಯೋಜನೆ ಬಗ್ಗೆ ಮಾಹಿತಿ ನೀಡಿದರು. ಯೋಜನೆ ಕುರಿತು ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಸಹಾಯಕ ಪ್ರಾಧ್ಯಾಪಕ ವೀರೇಶ ಗಜೇಂದ್ರಗಡ, ಇಬ್ರಾಹಿಂ ಸಾಬ ಕುದ್ರಿಮೋತಿ, ಶಶಿಕುಮಾರ, ಶರಣಪ್ಪ ಗುಡ್ಲಾನೂರ, ಮುಖಂಡ ಪುನಿತ್ ಕೊಪ್ಪಳ ಸೇರಿ ಅನೇಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.