ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆಗಳನ್ನು ಬಳಸಿಕೊಳ್ಳಿ: ವಿಶ್ವನಾಥ ರಡ್ಡಿ ಹೊಸಮನಿ

Last Updated 24 ನವೆಂಬರ್ 2020, 16:39 IST
ಅಕ್ಷರ ಗಾತ್ರ

ಕಾರಟಗಿ: ‘ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳ ಸದುಪಯೋಗ ‍ಪಡೆಯಬೇಕು’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ವಿಶ್ವನಾಥ ರಡ್ಡಿ ಹೊಸಮನಿ ಹೇಳಿದರು.

ತಾಲ್ಲೂಕಿನ ಸಿದ್ದಾಪುರದ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ನಡೆದ ಅಲ್ಪಸಂಖ್ಯಾತರ ಕಲ್ಯಾಣ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳು ಸಾಮರಸ್ಯದ ಬಗ್ಗೆ ತಿಳವಳಿಕೆ ಮೂಡಿಸಿ, ಐಕ್ಯತಾ ಸಪ್ತಾಹ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ದಿನಾಚರಣೆಯ ಮಹತ್ವವನ್ನು ಎತ್ತಿ ತೋರಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಕಾಶ ಭಾವಿ, ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಠಾನ ಸಮಿತಿ ಸದಸ್ಯ ಮೊಹಮ್ಮದ್‌ ಸಿರಾಜ್‌, ಸಾಹಿತಿ ಪೀರ್‌ಬಾವಾ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ವಿಸ್ತೀರ್ಣಾಧಿಕಾರಿ ಶ್ರೀನಿವಾಸ ನಾಯಕ ಸರ್ಕಾರ ಅಲ್ಪಸಂಖ್ಯಾತರಿಗೆ ನೀಡುತ್ತಿರುವ ಸೌಲಭ್ಯ ಹಾಗೂ ಯೋಜನೆಗಳ ಬಗ್ಗೆ ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ. ಬಸವರಾಜಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸರ್ದಾರ ಅಲಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಸದಸ್ಯ ಎಚ್.‌ಎ.ರೋಣದ ಹಾಗೂ ಉಪ ತಹಶೀಲ್ದಾರ್‌ ಪ್ರಕಾಶ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT