ಭಾನುವಾರ, ನವೆಂಬರ್ 27, 2022
26 °C

ಸುಕನ್ಯಾ ಸಮೃದ್ಧಿ ಮಹೋತ್ಸವ 10ರಂದು

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

ಕೊಪ್ಪಳ: ಇಲ್ಲಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅ. 10ರಂದು ಬೆಳಿಗ್ಗೆ 10.30ಕ್ಕೆ ಭಾರತೀಯ ಅಂಚೆ ಇಲಾಖೆಯ ಗದಗ ವಿಭಾಗದ ವತಿಯಿಂದ ಸುಕನ್ಯಾ ಸಮೃದ್ಧಿ ಮಹೋತ್ಸವ ಆಯೋಜಿಸಲಾಗಿದೆ.

ಗದಗ ವಿಭಾಗದ ಅಂಚೆ ಅಧೀಕ್ಷಕ ಪಿ. ಚಿದಾನಂದ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ’ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ದೇಶದ 75 ಅಂಚೆ ಕಚೇರಿಗಳನ್ನು ವಿಶೇಷವಾಗಿ ಗುರುತಿಸಲಾಗಿದ್ದು, ಅದರಲ್ಲಿ ಕೊಪ್ಪಳವೂ ಸ್ಥಾನ ಪಡೆದಿದೆ. ದಾನಿಗಳಿಂದ ಪ್ರಾಯೋಜಕತ್ವ ಪಡೆದು ಆಗಸ್ಟ್‌ 15ರಿಂದ ಇದುವರೆಗೆ ಜಿಲ್ಲೆಯಲ್ಲಿ ಐದು ಸಾವಿರ ಸುಕನ್ಯಾ ಸಮೃದ್ಧಿ ಖಾತೆಗಳನ್ನು ತೆರೆದು ಮೊದಲ ಕಂತು ಕಟ್ಟಲಾಗಿದೆ’ ಎಂದು ತಿಳಿಸಿದರು.

‘ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್‌, ಸಂಸದ ಸಂಗಣ್ಣ ಕರಡಿ, ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಎಸ್‌. ರಾಜೇಂದ್ರ ಕುಮಾರ, ಉತ್ತರ ಕರ್ನಾಟಕ ವಲಯದ ಪೋಸ್ಟ್‌ ಮಾಸ್ಟರ್‌ ಜನರಲ್‌ ಡಾ. ಎನ್‌. ವಿನೋದ ಕುಮಾರ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.

ಕೊಪ್ಪಳ ಪ್ರಧಾನ ಅಂಚೆ ಕಚೇರಿಯ ಪ್ರಧಾನ ಅಂಚೆ ಪಾಲಕ ಭೀಮಸೇನ ಎ.ಜೆ. ಸೇರಿದಂತೆ ಹಲವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು