ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂದರೇಶಬಾಬು ನೂತನ ಜಿಲ್ಲಾಧಿಕಾರಿ

Last Updated 18 ಜುಲೈ 2022, 15:44 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಸುಂದರೇಶಬಾಬು ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಗದಗ ಜಿಲ್ಲಾಧಿಕಾರಿಯಾಗಿದ್ದ ಸುಂದರೇಶ ಬಾಬು 2012ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಅದಕ್ಕೂ ಮೊದಲು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಇಲ್ಲಿ ಜಿಲ್ಲಾಧಿಕಾರಿಯಾಗಿದ್ದ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಸರ್ಕಾರ ಜು. 11ರಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ವರ್ಗಾಯಿಸಿತ್ತು. ಈ ಸ್ಥಾನಕ್ಕೆ ಆಗ ಯಾರನ್ನೂ ವರ್ಗಾವಣೆ ಮಾಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT