ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿಗಳ ಅಮಾನತು: ಸಂಸದ ಹಿಟ್ನಾಳ್ ಭೇಟಿ

Published 29 ಆಗಸ್ಟ್ 2024, 15:34 IST
Last Updated 29 ಆಗಸ್ಟ್ 2024, 15:34 IST
ಅಕ್ಷರ ಗಾತ್ರ

ಕುಕನೂರು: ಇಲ್ಲಿಯ ಜವಾಹರ ನವೋದಯ ವಿದ್ಯಾಲಯದ ಹಿರಿಯ, ಕಿರಿಯ ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಏಳು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಸಂಗತಿ ತಿಳಿಯುತ್ತಿದ್ದಂತೆಯೇ ಸಂಸದ ರಾಜಶೇಖರ ಹಿಟ್ನಾಳ್ ಅವರು ಸೋಮವಾರ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿ ಘಟನೆ ಕುರಿತು ವಿವರಗಳನ್ನು ಪಡೆದರು.

ಈ ಸಂದರ್ಭದಲ್ಲಿ ಸಂಸದ ರಾಜಶೇಖರ್,  ಪ್ರಾಚಾರ್ಯರು, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದರು.

‘ನಮ್ಮ ಜಿಲ್ಲೆಯಲ್ಲಿ ಅತ್ಯಂತ ಪ್ರತಿಷ್ಠಿತ ವಸತಿ ಶಾಲೆ ಇದಾಗಿದ್ದು, ಶಾಲೆಗೆ ಕಳಂಕ ತರುವ ಕೆಲಸ ಮಾಡಬೇಡಿ. ಪೋಷಕರು ಹೇಳಿದಂತೆ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಇದ್ದಾರೆ ಎನಿಸುತ್ತಿದೆ. ಅವರಿಗೆ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಿ. ತಿಂಗಳಲ್ಲಿ ಒಮ್ಮೆ ವಿದ್ಯಾರ್ಥಿಗಳ ಕೌನ್ಸೆಲಿಂಗ್‌ ನಡೆಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುತ್ತೇವೆ. ಎಲ್ಲ ವಿದ್ಯಾರ್ಥಿಗಳ, ಹಿತ, ಭವಿಷ್ಯ ಮುಖ್ಯ. ಶಾಲೆಯಲ್ಲಿ ಮುಕ್ತ ವಾತಾವರಣ ನಿರ್ಮಿಸಬೇಕು’ ಎಂದು ಆಡಳಿತ ಮಂಡಳಿ, ಸಿಬ್ಬಂದಿಗೆ ಸಲಹೆ ನೀಡಿದರು.

ನಂತರ ಮಾತನಾಡಿದ ಅವರು, ‘ಕಟ್ಟಡಗಳ ನಿರ್ಮಾಣ, ಶಾಲೆಯ ನವೀಕರಣಕ್ಕಾಗಿ ₹ 110 ಕೋಟಿ ಅನುದಾನ ಕೇಳಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಹಣಕಾಸು ಮಂತ್ರಿ ಹಾಗೂ ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಶೀಘ್ರದಲ್ಲಿ ಮಂಜೂರು ಮಾಡಿಕೊಡುವಂತೆ ಮನವರಿಕೆ ಮಾಡುವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT