ವಿವೇಕಾನಂದರ ಆದರ್ಶ ಅಳವಡಿಸಿಕೊಳ್ಳಿ- ವಿವೇಕಾನಂದ ಆಶ್ರಮದ ಚೈತನ್ಯಾನಂದ ಸ್ವಾಮೀಜಿ

ಕೊಪ್ಪಳ: ‘ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ಯುವ ಸಮುದಾಯ ಜೀವನದಲ್ಲಿ ಅಳವಡಿಸಿಕೊಂಡು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು’ ಎಂದು ವಿವೇಕಾನಂದ ಆಶ್ರಮದ ಚೈತನ್ಯಾನಂದ ಸ್ವಾಮೀಜಿ ಹೇಳಿದರು.
ಇಲ್ಲಿನ ಗವಿಸಿದ್ಧೇಶ್ವರ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವ ಸಮುದಾಯ ನಿರಂತರವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು. ಉತ್ತಮ ಗುಣಗಳನ್ನು ಬೆಳೆಸಿಕೊಂಡು ಆದರ್ಶ ಜೀವನ ಸಾಗಿಸಬೇಕು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಮಾತನಾಡಿ,‘ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿ ಸಮೂಹ ಪಠ್ಯಕ್ಕೆ ಮಾತ್ರ ಸೀಮಿವಾಗದೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ದೇಶದ ಪ್ರಚಲಿತ ವಿದ್ಯಾಮಾನಗಳನ್ನು ತಿಳಿದುಕೊಳ್ಳಬೇಕು’ ಎಂದರು.
ದೇಶದ ಅಭಿವೃದ್ಧಿಗೆ ಕೋಮು ಭಾವನೆ ಅಡ್ಡಿಯಾಗಿದ್ದು, ಕೋಮು ಸೌಹಾರ್ದತೆ ಸಾಧಿಸಲು ಸ್ವಾಮಿ ವಿವೇಕಾನಂದ ಅವರ ಆದರ್ಶ ಗುಣಗಳನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ಪ್ರಯತ್ನಿಸಬೇಕು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕ್ರಾಂತಿ ಗೀತೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ದೃಶ್ಯ ರೂಪಕ ಪ್ರದರ್ಶಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ವಸ್ತ್ರದ್, ಪ್ರಾಚಾರ್ಯ ಚನ್ನಬಸವ ಎ, ಕ್ರೀಡಾ ಇಲಾಖೆಯ ನಿರ್ದೇಶಕ ಅಮೃತ , ರಾಜು ಹೊಸಮನಿ ಹಾಗೂ ನಾಗರಾಜ್ ದಂಡೋತಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.