ಗಂಗಾವತಿ: ನಗರದ ಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್‌ಗಳನ್ನು ವಿತರಿಸಲಾಯಿತು.

ಶಾಸಕ ಶಾಸಕ ಪರಣ್ಣ ಮುನವಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು, ನಂತರ ಮಾತನಾಡಿ, ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯ ಸರ್ಕಾರದ ಆದೇಶದಂತೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗಿದೆ. ಎಸ್‍ಕೆಎನ್‍ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಲ್ಲಿ 1,136 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಾಯೋಗಿಕವಾಗಿ ಸದ್ಯ ಕೆಲ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಠಿಯಿಂದ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದ್ದು, ವಿದ್ಯಾರ್ಥಿಗಳು ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಜಿ.ಹೆಬಸೂರು, ಕಾಲೇಜು ಅಭಿವೃದ್ಧಿ ಮಂಡಳಿ ಕಾರ್ಯಾಧ್ಯಕ್ಷ ಶಿವಾನಂದ ಮೇಟಿ, ಸದಸ್ಯರಾದ ಕೋರಿಶೆಟ್ಟರ್, ಸಂತೋಷ್ ಮೇದಾರ್ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.