ದಾಖಲೆಗಳನ್ನು ಪರಿಶೀಲಿಸಿ ನಾಮಪತ್ರ ಪಡೆಯಿರಿ: ಎಂ.ರೇಣುಕಾ

ಗಂಗಾವತಿ: ‘ಗ್ರಾಮ ಪಂಚಾಯಿತಿ ಚುನಾವಣೆಗೆ ತಾಲ್ಲೂಕಿನಲ್ಲಿ ಡಿ.11 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಚುನಾವಣಾಧಿಕಾರಿಗಳು ಅಭ್ಯರ್ಥಿಗಳ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿ, ನಾಮಪತ್ರ ಪಡೆಯಬೇಕು’ ಎಂದು ತಹಶೀಲ್ದಾರ್ ಎಂ.ರೇಣುಕಾ ಸೂಚಿಸಿದರು.
ನಗರದ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಬುಧವಾರ ನಡೆದ ಚುನಾವಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ನಾಮಪತ್ರ ಸ್ವೀಕರಿಸುವಾಗ ಗೊಂದಲಕ್ಕೆ ಒಳಗಾಗಬಾರದು. ಕೋವಿಡ್ ನಿಯಮಗಳನ್ನು ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.
ನೋಡಲ್ ಅಧಿಕಾರಿ ನಾಗರಾಜ್ ಮಾತನಾಡಿ ಮತ ಪತ್ರದ ನಮೂನೆಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳ ಚುನಾವಣಾಧಿಕಾರಿಗಳಿಗೆ ಮತ ಪತ್ರದ ನಮೂನೆಗಳನ್ನು ಹಾಗೂ ಕೋವಿಡ್ ಸುರಕ್ಷಾ ಕಿಟ್ಗಳನ್ನು ವಿತರಣೆ ಮಾಡಲಾಯಿತು.
ತಾಲ್ಲೂಕು ಆಡಳಿತ ಸಿಬ್ಬಂದಿ ಹಾಗೂ ಚುನಾವಣಾಧಿಕಾರಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.