ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಜೊತೆ ತಹಶೀಲ್ದಾರ್ ಅನುಚಿತ ವರ್ತನೆ: ವಿಡಿಯೊ ವೈರಲ್

Last Updated 26 ಆಗಸ್ಟ್ 2020, 13:15 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಹಶೀಲ್ದಾರ್ ಆಗಿದ್ದ ಗುರುಬಸವರಾಜ ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಘಟನೆ ಬುಧವಾರ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿದಾಡುತ್ತಿದೆ.

ನಾಲ್ಕು ತಿಂಗಳ ಹಿಂದೆ ಅಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಹಿಳಾ ಸಿಬ್ಬಂದಿಯನ್ನು ತಬ್ಬಿಕೊಂಡು ಮುತ್ತಿಕ್ಕಿದ ದೃಶ್ಯ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ಸದ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರಸ್ತೇದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಘಟನೆಯ ಕಾರಣದಿಂದಲೇ ಕುಷ್ಟಗಿಯಿಂದ ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು ಎನ್ನಲಾಗುತ್ತದೆ. ವಿಡಿಯೊ ಈಗ ಸಾರ್ವಜನಿಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತಕ್ಕೆ ತೀವ್ರ ಮುಜುಗರ ತಂದಿದೆ.

ದೀರ್ಘಕಾಲದ ಮೇಲೆ ವಿಡಿಯೊ ಹರಿಬಿಟ್ಟಿರುವುದು ಕೂಡಾ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT