ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಟಗಿ: ಕೋವಿಡ್‌ ಕೇಂದ್ರಕ್ಕೆ ತಹಶೀಲ್ದಾರ್‌ ಭೇಟಿ

Last Updated 13 ಸೆಪ್ಟೆಂಬರ್ 2020, 8:28 IST
ಅಕ್ಷರ ಗಾತ್ರ

ಕುಷ್ಟಗಿ: ಚಿಕಿತ್ಸೆಗೆ ದಾಖಲಾದ ರೋಗಿಗಳ ಆರೋಗ್ಯ ಸುಧಾರಣೆಗೆ ಮುತುವರ್ಜಿ ವಹಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ತಹಶೀಲ್ದಾರ್ ಎಂ.ಸಿದ್ದೇಶ್‌ ಹೇಳಿದರು.

ಶನಿವಾರ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಡೆಡಿಕೇಟೆಡ್ ಕೋವಿಡ್‌ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲಿಸಿದರು.

ಕೋವಿಡ್‌ರೋಗಕ್ಕೆ ತುತ್ತಾದ ರೋಗಿಗಳು ಸಹಜವಾಗಿಯೇ ಮಾನಸಿಕವಾಗಿ ಅಸ್ಥಿರತೆ ಹೊಂದಿರುತ್ತಾರೆ. ಅವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕಾಳಜಿ ತೋರಬೇಕು. ನಿಯಮಗಳ ಪ್ರಕಾರ ಚಿಕಿತ್ಸೆ, ಔಷಧಿ ಮತ್ತು ಪೌಷ್ಟಿಕ ಆಹಾರಗಳನ್ನು ಕಾಲಕಾಲಕ್ಕೆ ಒದಗಿಸುವಂತೆ ಸೂಚಿಸಿದರು.

ನಂತರ ಮಾಹಿತಿ ನೀಡಿದ ಅವರು, ಕೇಂದ್ರದಲ್ಲಿ ಸದ್ಯ 12 ಜನ ರೋಗಿಗಳು ಇದ್ದಾರೆ. ನಿಯೋಜಿತ ವೈದ್ಯರು ಮತ್ತು ಸಿಬ್ಬಂದಿ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಕೇಂದ್ರದಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇಲ್ಲ ಎಂದು ವಿವರಿಸಿದರು.

ಇಲ್ಲಿಯವರೆಗೆ ತಾಲ್ಲೂಕಿನಲ್ಲಿ 1181 ಜನರಿಗೆ ಸೋಂಕು ತಗುಲಿತ್ತು, 340 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 284 ಜನರು ಹೋಂ ಐಸೋಲೇಶನ್‌ಗೆ ಒಳಗಾಗಿದ್ದಾರೆ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶರಣಪ್ಪ ಮೂಲಿಮನಿ ಮತ್ತು ಸಿಬ್ಬಂದಿ ಇದ್ದರು.

ಗ್ರಾಮಾಂತರ ಪ್ರದೇಶದಲ್ಲಿನ ಜನರ ತಪಾಸಣೆ ನಡೆಸಲು ಮೊಬೈಲ್‌ ತಂಡಗಳನ್ನು ಕಳಿಸಲಾಗುತ್ತಿದೆ. ಪಟ್ಟಣದ ಕೋವಿಡ್‌ ಆರೋಗ್ಯ ಕೇಂದ್ರದಲ್ಲಿ ಇಲ್ಲಿಯವರೆಗೆ ದಾಖಲಾಗಿದ್ದ ಒಟ್ಟು 76 ರೋಗಿಗಳ ಪೈಕಿ 55 ಜನರನ್ನು ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶರಣಪ್ಪ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT