ಶುಕ್ರವಾರ, ಆಗಸ್ಟ್ 19, 2022
27 °C
ಚುನಾವಣಾಧಿಕಾರಿಗಳ ಸಭೆಯಲ್ಲಿ ತಾಲ್ಲೂಕು ನೋಡಲ್ ಅಧಿಕಾರಿ ಡಾ.ನಾಗರಾಜ ಸೂಚನೆ

ಮತಗಟ್ಟೆಗಳ ಸೌಕರ್ಯ ಪರಿಶೀಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ‘ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿನ ಮೂಲ ಸೌಕರ್ಯಗಳ ಕುರಿತು ಮಾಹಿತಿ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಚುನಾವಣೆ ತಾಲ್ಲೂಕು ನೋಡಲ್ ಅಧಿಕಾರಿ ಡಾ.ನಾಗರಾಜ ತಿಳಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಚುನಾವಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸಿಬ್ಬಂದಿ, ಅವಶ್ಯ ಸಾಮಗ್ರಿಗಳನ್ನು ತೆಗೆದುಕೊಂಡು ಒಂದು ದಿನ ಮುಂಚಿತವಾಗಿಯೇ ಮತಗಟ್ಟೆಗಳಿಗೆ ತೆರಳಬೇಕು. ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

18 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿರುವ ಕಾರಣ ತಾಲ್ಲೂಕಿನಲ್ಲಿ 159 ಮತಗಟ್ಟೆಗಳನ್ನು ತೆರೆಯಲಾಗಿದೆ. ಸಿಬ್ಬಂದಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ರಾತ್ರಿ ಬೆಳಕಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಚುನಾವಣಾಧಿಕಾರಿಗಳು ಮತದಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಬೇಕು. ಸ್ಯಾನಿಟೈಜರ್ ಬಳಕೆ, ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ತಹಶೀಲ್ದಾರ್ ಎಂ.ರೇಣುಕಾ, ಕಚೇರಿ ಸಿಬ್ಬಂದಿ ಮಹೇಶ ದಲಾಲ್, ರಫೀಕ್ ಹಾಗೂ ಶರಣಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು