ಕೊಪ್ಪಳ: ‘ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಮಾಡಿದ ಕೆಲಸಗಳು ತೃಪ್ತಿ ನೀಡಿವೆ. ಅನೇಕ ಸವಿ ನೆನಪುಗಳ ಸಿಹಿಯೊಂದಿಗೆ ನಿರ್ಗಮಿಸುತ್ತಿದ್ದೇನೆ’ ಎಂದು ಹಿಂದಿನ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಹೇಳಿದರು.

ಜಿಲ್ಲಾಡಳಿತ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ‘ಈಗಿನ ಜನ ಇಲ್ಲಿನ ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ಬಗ್ಗೆ ಗೌರವ ಇಟ್ಟುಕೊಂಡಿದ್ದಾರೆ. ಒಳ್ಳೆಯ ಕೆಲಸಕ್ಕೆ ಸದಾ ಸಹಕಾರ ಕೊಡುತ್ತಾರೆ’ ಎಂದರು.

‘ಕೊಪ್ಪಳ ಜಿಲ್ಲೆ ಅಭಿವೃದ್ಧಿ ಪಥದಲ್ಲಿದೆ. ರಚನಾತ್ಮಕ ಕೆಲಸಗಳನ್ನು ಮಾಡಲು ಜಿಲ್ಲೆಯಲ್ಲಿ ಸಾಕಷ್ಟು ಅವಕಾಶಗಳಿವೆ. ಭೌಗೋಳಿಕವಾಗಿಯೂ ಇದು ಅನೇಕ ವಿಶೇಷತೆಗಳನ್ನು ಒಳಗೊಂಡಿದೆ. ಕಡಿಮೆ ಅವಧಿಯಲ್ಲಿ ಕೊಪ್ಪಳ ರಜತ ಮಹೋತ್ಸವ, ಹನುಮಮಾಲೆ ವಿರ್ಜನೆ, ವಿಧಾನಸಭಾ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಣೆ ಮಾಡಿದ ತೃಪ್ತಿಯಿದೆ’ ಎಂದರು.

ನೂತನ ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ ‘ಸುಂದರೇಶ ಬಾಬು ಅವರು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದ ಜೊತೆ ಹೊಂದಿದ್ದ ವಿಶ್ವಾಸ ಮತ್ತು ಕಾರ್ಯದ ಶೈಲಿಯನ್ನು ನಾನೂ ಮುಂದುವರಿಸುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಅಭಿವೃದ್ಧಿ ಕೆಲಸ ಮಾಡುವೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯ’ ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಉಪಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಸುಂದರೇಶ ಬಾಬು ಅವರ ಪತ್ನಿ ಶಿವಶಂಕರಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.