ಶನಿವಾರ, ಸೆಪ್ಟೆಂಬರ್ 25, 2021
23 °C

ತಾವರಗೇರಾ: ಶಿಕ್ಷಕರಿಂದ ಮನೆ ಮನೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ಶಿಕ್ಷಣ ಇಲಾಖೆ 2021-22ನೇ ಶೈಕ್ಷಣಿಕ ವರ್ಷ ಆರಂಭಿಸಿದ್ದು, ವಿವಿಧ ಚಟುವಟಿಕೆಗಳನ್ನು ನಡೆಸಲು ಯೋಜನೆ ರೂಪಿಸಿದೆ.

‘ವಿದ್ಯಾರ್ಥಿಗಳ ಪೋಷಕರಿಗೆ ತಿಳಿವಳಿಕೆ ನೀಡುವ ಕಾರ್ಯಕ್ರಮವನ್ನೂ ಮಾಡಲಾಗಿದೆ’ ಎಂದು ಮೆಣೇಧಾಳ ಸಿಆರ್‌ಪಿ ಶರಣಪ್ಪ ತುಮರಿಕೊಪ್ಪ ತಿಳಿಸಿದರು.

ಮೇಣೆಧಾಳ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಿಬ್ಬಂದಿ, ಎಸ್‌ಡಿಎಂಸಿ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಂತರ ಗ್ರಾಮದ ಎಲ್ಲ ಮನೆಗಳಿಗೆ ಭೇಟಿ ನೀಡಿ, ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕ ಶರಣಪ್ಪ ಬಸಾಪೂರ, ಸಹ ಶಿಕ್ಷಕರಾದ ಬಸಪ್ಪ ಮೇಟಿ, ಸುಲೋಚನಾ, ಜಯಶ್ರೀ, ಸವಿತಾ, ಮಹಾಮಲ್ಲಪ್ಪ, ಹಡಗಲಿ ಶಾಲೆಯ ಮುಖ್ಯ ಶಿಕ್ಷಕ ಮಲ್ಲರಡ್ಡೆಪ್ಪ ಮತ್ತು ಪೋಷಕರು ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು