ಕನಕಗಿರಿ: ಪಟ್ಟಣ ಸೇರಿ ವಿವಿಧ ಗ್ರಾಮಗಳಲ್ಲಿ ಶನಿವಾರ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಯಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸಣ್ಣ ಕನಕಪ್ಪ ಅವರು ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

ಪ್ರಭಾರ ಮಖ್ಯಶಿಕ್ಷಕ ಮಲ್ಲಿಕಾರ್ಜುನ ಕುಷ್ಟಗಿ ಮಾತನಾಡಿ,‘ಸಮಾಜದಲ್ಲಿ ಶಿಕ್ಷಕರ ವೃತ್ತಿ ಪ್ರವಿತ್ರವಾದದ್ದು. ಅದನ್ನು ಉಳಿಸಿ ಬೆಳಸಿಕೊಂಡು ಹೋಗಬೇಕು’ ಎಂದು ತಿಳಿಸಿದರು.

ಶಿಕ್ಷಕರಾದ ದುರಗಪ್ಪ, ಹುಲಿಗೆಮ್ಮ ದಂಡೀನ್ ಸೇರಿದಂತೆ ಶಿಕ್ಷಕರು ಇದ್ದರು.

ದ್ಯಾಮ್ಮವನಗುಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿ ನಾಗರತ್ನ, ಶಿಕ್ಷಕಿ ಶಂಶಾದಬೇಗಂ ಮಾತನಾಡಿದರು. ಶಿಕ್ಷಕರಾದ ಗೌರಮ್ಮ ಬಳಿಗಾರ, ಅಕ್ಕಮಹಾದೇವಿ ಕಿತ್ತೂರು ಹಾಗೂ ಶಿವಕುಮಾರ ಇದ್ದರು.

ಸಮೀಪದ ಹುಲಿಹೈದರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಪ್ರಾಂಶುಪಾಲ ಕೊಟ್ರೇಶ ಮುಕಾರಿ, ಶಿಕ್ಷಕರಾದ ಎ.ಕೆ. ಪರಶುರಾಮ, ಅಂಬಿಕಾ ಪಾಟೀಲ ಹಾಗೂ ಎಚ್. ಕನಕರಾಯ ಡಗ್ಗಿ ಇದ್ದರು.

‘ಶಿಕ್ಷಕರನ್ನು ನಿರ್ಲಕ್ಷ್ಯಿಸದಿರಿ’

ಕಾರಟಗಿ: ಶಿಕ್ಷಕರ ಬಗ್ಗೆ ಸರ್ಕಾರ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವುದು ತರವಲ್ಲ. ಖಾಸಗಿ ಶಾಲಾ ಶಿಕ್ಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರ ನೆರವಿಗೆ ಸರ್ಕಾರವು ವಿಶೇಷ ಪ್ಯಾಕೇಜ್ ಘೋಷಿಸಬೇಕು’ ಎಂದು ಶಿಕ್ಷಕ ಶರಣಪ್ಪ ಅಂಗಡಿ ಹೇಳಿದರು.

ಪಟ್ಟಣದ ಶಾಂತಿನಿಕೇತನ ಪಬ್ಲಿಕ್ ಶಾಲಾ ಆವರಣದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೊರೊನಾ ಲಾಕ್‌ಡೌನ್ ಪರಿಣಾಮದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಶಿಕ್ಷಕರು ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಾ, ನಿತ್ಯದ ಜೀವನ ನಡೆಸಲು ಹರಸಾಹಸ ಪಡುವಂತಾಗಿದೆ’ ಎಂದರು.

ಶಿಕ್ಷಣ ಸಂಸ್ಥೆಯ ಶರಣಪ್ಪ, ಶಿಕ್ಷಕ ಮಲ್ಲಿಕಾರ್ಜುನ ಹಂಚಿನಾಳ, ನಾಗರಾಜ ಚಳ್ಳೂರು ಇದ್ದರು.

‘ಮಾರ್ಗದರ್ಶಿ ಶಿಕ್ಷಕರಿಂದ ಮಕ್ಕಳಿಗೆ ಉತ್ತಮ ಭವಿಷ್ಯ’

ಗಂಗಾವತಿ : ಎಲ್ಲಿ ಶಿಕ್ಷಕರು ಮಾರ್ಗದರ್ಶಿಗಳಾಗುತ್ತಾರೆಯೋ ಅಲ್ಲಿ ಉತ್ತಮ ವಿದ್ಯಾರ್ಥಿಗಳು ನಿರ್ಮಾಣವಾಗುತ್ತಾರೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ರಫಿ ಹೇಳಿದರು.

ನಗರದ ಐಎಂಎ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಮತ್ತು ಶಿಕ್ಷಣಾಧಿಕಾರಿಗಳ ಸಂಘದ ವತಿಯಿಂದ ಸರಳವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ತಿಂಗಳ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಈ ಭಾಗಕ್ಕೆ ಕೀರ್ತಿ ತಂದಿದ್ದಾರೆ. ಕೋವಿಡ್ ಸಮಯದಲ್ಲೂ ಶಿಕ್ಷಕರು ತಮ್ಮ ಜೀವವನ್ನು ಲೆಕ್ಕಿಸದೇ, ವಠಾರ, ವಿದ್ಯಾಗಮ ಯೋಜನೆಗಳ ಮೂಲಕ ಮಕ್ಕಳಿಗೆ ಪಾಠ ಮಾಡುವ ಮೂಲಕ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾತನಾಡಿದರು.

ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ, ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ್, ತಾ.ಪಂ. ಉಪಾಧ್ಯಕ್ಷೆ ಗೀತಾ ಶರಣೇಗೌಡ, ಅಧಿಕಾರಿ ವಿವಿ ಗೊಂಡಬಾಳ, ಸಿಡಿಪಿಒ ಗಂಗಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.