ಮಂಗಳವಾರ, ಸೆಪ್ಟೆಂಬರ್ 21, 2021
21 °C
‘ಕುಸುಮ’ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಖಾಸಗಿ ಶಿಕ್ಷಕರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ: ಸಾಹಿತಿ ವಿಠ್ಠಪ್ಪ ಗೋರಂಟ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಸಮಾಜದ ಅಭಿವೃದ್ಧಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಬುನಾದಿಯಾಗಿವೆ. ಹಾಗಾಗಿ ಖಾಸಗಿ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಹೇಳಿದರು.

ನಗರ ಸಮೀಪದ ಭಾಗ್ಯನಗರದ ನ್ಯಾಷನಲ್‌ ಸ್ಕೂಲ್‌ನಲ್ಲಿ ಸೋಮವಾರ ತಾಲ್ಲೂಕು ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ(ಕುಸುಮ) ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು.

ಖಾಸಗಿ ಶಾಲೆ ಶಿಕ್ಷಕರ ಬಗ್ಗೆ, ಆಡಳಿತ ಮಂಡಳಿಯ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸಬೇಕು. ಆದರ್ಶ ಶಿಕ್ಷಕಿ ಸಾವಿತ್ರಿಬಾಯಿ ಜೀವನ ಸಾಧನೆ ಮತ್ತು ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜೀವನವನ್ನು ತಿಳಿದು, ಶಿಕ್ಷಕರು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಮಕ್ಕಳನ್ನು ತಿದ್ದುವ ಉತ್ತಮ ಶಿಕ್ಷಕರು ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುವರು ಎಂದರು.

ಕುಸುಮ ತಾಲ್ಲೂಕು ಅಧ್ಯಕ್ಷ ಶಾಹಿದ್ ತಹಸೀಲ್ದಾರ್ ಅಧ್ಯಕ್ಷತೆ ವಹಿಸಿದ್ದರು.

ಬಿಜೆಪಿ ಮುಖಂಡ ಸಿ.ವಿ.ಚಂದ್ರಶೇಖರ, ಕುಸುಮ ಕಲ್ಯಾಣ ಕರ್ನಾಟಕದ ಅಧ್ಯಕ್ಷ ಆರ್.ಪಾನಘಂಟಿ, ಮಾಜಿ ಸಚಿವ ವಿರೂಪಾಕ್ಷ ಅಗಡಿ, ಕುಸುಮ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಹ್ಲಾದ್ ಅಗಳಿ ಇದ್ದರು.

ಸುಲೋಚನಾ ಪಾಟೀಲ್‌ ಪ್ರಾರ್ಥಿಸಿದರು. ಸಂದೇಶ ಪಟ್ಟಣಶೆಟ್ಟಿ ಸ್ವಾಗತಿಸಿದರು. ಮಲ್ಲಿಕಾರ್ಜುನ್‌ ಚೌಕಿಮಠ ಪ್ರಾಸ್ತಾವಿಕ ಮಾತನಾಡಿದರು. ಎ.ಕೆ.ಮಲ್ಲಣನವರ್‌ ನಿರೂಪಿಸಿದರು. ನಾಗರಾಜ್‌ ಗುಡಿ
ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು