ಭಾನುವಾರ, ಜುಲೈ 3, 2022
24 °C

ಶಿಕ್ಷಕರ ಸಂಘದ ಚುನಾವಣೆ: ಉತ್ಸಾಹದಿಂದ ಮತ ಚಲಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಮತದಾನ ನಡೆಯಿತು.

ತಾಲ್ಲೂಕು ಘಟಕದ ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆಯಿತು.

ನಗರ ಹಾಗೂ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಉತ್ಸಾಹದಿಂದ ಹಕ್ಕು ಚಲಾಯಿಸಿದರು.

ಈ ಪೈಕಿ 4 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಾಮಾನ್ಯ ವರ್ಗಕ್ಕೆ ಮೀಸಲಾದ 9 ಸ್ಥಾನಗಳಿಗೆ 25 ಪುರುಷ ಅಭ್ಯರ್ಥಿಗಳು ಸ್ಪರ್ಧಿಸಿದರೆ, ಮಹಿಳಾ ಮೀಸಲು ಸ್ಥಾನಗಳಿಗೆ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 657 ಮತದಾರರು ಇದ್ದಾರೆ. ಬೆಳಿಗ್ಗೆ 7.30 ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಸಮಯ ನಿಗದಿಪಡಿಸಲಾಗಿತ್ತು.

ಮತದಾನಕ್ಕೆ ಮತಪತ್ರ ಬಳಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು