ಸೋಮವಾರ, ಡಿಸೆಂಬರ್ 6, 2021
25 °C

ಕೊಪ್ಪಳ ದೇಗುಲಗಳಲ್ಲಿ ಪ್ರಸಾದ ಸೇವೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಜಿಲ್ಲೆಯ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ, ಕನಕಗಿರಿಯ ಕನಕಾಚಲಪತಿ ಮತ್ತು ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪೂರದ (ಆನೆಗೊಂದಿಯ) ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಎಲ್ಲ ಸೇವೆಗಳು, ಕೊಠಡಿಗಳು ಹಾಗೂ ಅನ್ನಪ್ರಸಾದ ಆರಂಭಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ಕಾರಣ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತರಿಗೆ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗಳಿಗೆ ಸೀಮಿತಗೊಳಿಸಿ ಸರ್ಕಾರ ಆದೇಶಿಸಿತ್ತು. ಸದ್ಯ ಲಾಕ್‌ಡೌನ್ ವಿನಾಯಿತಿ ನೀಡಿರುವ ಕಾರಣ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಕೋವಿಡ್-19 ನಿಯಮದ ಪ್ರಕಾರ ಎಲ್ಲ ಸೇವೆಗಳಿಗೆ ಅವಕಾಶ ನೀಡುವಂತೆ ಆಯಾ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಭಕ್ತರು ಮನವಿ ಸಲ್ಲಿಸಿದ್ದರು.

ದೇವಸ್ಥಾನಗಳಲ್ಲಿ ದರ್ಶನಕ್ಕೆ ಬರುವ ಭಕ್ತರು ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ಸರಾಗವಾಗಿ ಸಾಗಲು ವ್ಯವಸ್ಥೆ ಮಾಡಬೇಕು.

ದೇಹದ ಉಷ್ಣಾಂಶ ಪರೀಕ್ಷಿಸಬೇಕು. ಸ್ಯಾನಿಟೈಸರ್‌ ಸಿಂಪಡಿಸಬೇಕು ಎಂದು ತಿಳಿಸಿದ್ದಾರೆ.

ಮಾರ್ಗಸೂಚಿ ಉಲ್ಲಂಘನೆ ಕಂಡುಬಂದಲ್ಲಿ ಆದೇಶ ರದ್ದು ಪಡಿಸಲಾಗುವುದು. ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಹಕರಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.