ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ತುಂಗಭದ್ರಾ ನದಿಯಲ್ಲಿ ಬಾಲಕ ನಾಪತ್ತೆ

Published 27 ನವೆಂಬರ್ 2023, 16:52 IST
Last Updated 27 ನವೆಂಬರ್ 2023, 16:52 IST
ಅಕ್ಷರ ಗಾತ್ರ

ಮುನಿರಾಬಾದ್ (ಕೊಪ್ಪಳ ಜಿಲ್ಲೆ): ಗೌರಿ ಹುಣ್ಣಿಮೆಯ ಅಂಗವಾಗಿ ಸೋಮವಾರ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಬಂದಿದ್ದ ಬಾಲಕನೊಬ್ಬ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದು, ಬಾಲಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ನಾಪತ್ತೆಯಾದ ಬಾಲಕನನ್ನು ಯಲಬುರ್ಗಾ ತಾಲ್ಲೂಕು ಕುದ್ರಿಕೊಟಿಗೆ ಗ್ರಾಮದ ಕನಕಪ್ಪ ಈರಪ್ಪ ಮಾದರ್ ಎಂದು ಗುರುತಿಸಲಾಗಿದೆ.

ನಾಪತ್ತೆಯಾದ ಬಾಲಕನನ್ನು ಕುಟುಂಬದವರು, ಅಗ್ನಿಶಾಮಕ, ತುರ್ತುಸೇವೆಯ ಸಿಬ್ಬಂದಿ ಹಾಗೂ ಪೊಲೀಸರು ಹುಡುಕುತ್ತಿದ್ದಾರೆ. ಸೋಮವಾರ ರಾತ್ರಿ 9 ಗಂಟೆಯವರೆಗೆ ಯಾವುದೇ ಸುಳಿವು ಲಭಿಸಿಲ್ಲ. ಶೋಧ ಕಾರ್ಯ ಮುಂದುವರಿದಿದೆ ಎಂದು ಮುನಿರಾಬಾದ್ ಪೊಲೀಸರು 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT