ಕೊಪ್ಪಳ: ‘ಕೂಸಿನ ಮನೆಗಳು ಮಕ್ಕಳ ಆಕರ್ಷಣೆಯ ಕೇಂದ್ರಗಳಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆ ಹೇಳಿದರು.
ತಾಲ್ಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿಗೆ ಶುಕ್ರವಾರ ಭೇಟಿ ನೀಡಿದ ಅವರು ‘ಈಗಾಗಲೇ ಕಟ್ಟಡಕ್ಕೆ ರಂಗು ರಂಗಿನಿಂದ ಮಕ್ಕಳ ಚಿತ್ರಗಳನ್ನು ಬಿಡಿಸಲಾಗಿದೆ. ಮನೆಗೆ ಸೋಲಾರ್ ವ್ಯವಸ್ಥೆ ಅಳವಡಿಸಿದಲ್ಲಿ ವಿದ್ಯುತ್ ಸಮಸ್ಯೆ ಉದ್ಭವಿಸುವದಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ವಿನೂತನ ಆಟಿಕೆ ಸಾಮಗ್ರಿ ಒದಗಿಸಬೇಕು. ಈ ಮನೆಗಳನ್ನು ಮಾದರಿ ಕೇಂದ್ರಗಳನ್ನಾಗಿ ಮಾಡಬೇಕು’ ಎಂದರು.
ಗ್ರಾಮ ಪಂಚಾಯತಿಯ ಅಂಗವಿಕಲರ ಸ್ನೇಹಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅಗತ್ಯ ಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲಿಸಿದರು. ಗ್ರಾ.ಪಂ.ನಿಂದ ನರೇಗಾ ಯೋಜನೆಯಡಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನ ಪರಿಶೀಲಿಸಿದರು.
ಜಿ.ಪಂ. ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಪಿಡಿಒ ವೀರನಗೌಡ, ಕಾರ್ಯದರ್ಶಿ ನೀಲಮ್ಮ, ಗ್ರಾ.ಪಂ ಸಿಬ್ಬಂದಿ ಚಂದ್ರಶೇಖರ, ವಿರೇಶ್, ಮಂಜುನಾಥ, ಕಾರ್ತಿಕ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.