ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಗೆ ರಾಯರಡ್ಡಿ ಪತ್ರದ ಬೆನ್ನಲ್ಲೆ ಸಭೆ ಕರೆದ ಸಚಿವರು

Published 4 ಸೆಪ್ಟೆಂಬರ್ 2023, 18:15 IST
Last Updated 4 ಸೆಪ್ಟೆಂಬರ್ 2023, 18:15 IST
ಅಕ್ಷರ ಗಾತ್ರ

ಕೊಪ್ಪಳ: ಟ್ರಾನ್ಸ್‌ಫಾರ್ಮರ್‌ ಬದಲಾವಣೆ ಸೇರಿದಂತೆ ವಿದ್ಯುತ್‌ಗೆ ಸಂಬಂಧಿಸಿದ ಕೆಲಸಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೆ ಈಗ ಸಭೆ ಆಯೋಜಿಸಿ ಆದೇಶ ಹೊರಡಿಸಲಾಗಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಬೆಸ್ಕಾಂ ಕಚೇರಿಯ ಬೆಳಕು ಭವನದಲ್ಲಿ ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಅಧಿಕಾರಿಗಳ ಕರೆಯಲಾಗಿದೆ. ರಾಯರಡ್ಡಿ ಅವರು ಪತ್ರದ ಹಿನ್ನೆಲೆಯಲ್ಲಿ ಚರ್ಚಿಸುವ ಸಂಬಂಧವೇ ಸಭೆ ಕರೆಯಲಾಗಿದೆ ಎಂದು ಪ‍ತ್ರದಲ್ಲಿ ಉಲ್ಲೇಖಿಸಲಾಗಿದೆ.

ಜೆಸ್ಕಾಂ ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಉಪಕರಣಗಳ ಪೂರೈಕೆಯೂ ವಿಳಂಬವಾಗುತ್ತಿದ್ದು, ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧ್ಯಕ್ಷತೆಯಲ್ಲಿ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಬೇಕು ಎಂದು ರಾಯರಡ್ಡಿ ಆಗ್ರಹಿಸಿದ್ದರು.

ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಶಾಸಕರ ಕರೆ ಸ್ವೀಕರಿಸುತ್ತಿಲ್ಲ ಎಂಬ ಅಂಶವನ್ನೂ ಪತ್ರದಲ್ಲಿ ಅವರು ಉಲ್ಲೇಖಿಸಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪತ್ರ ಬರೆದ ಎರಡು ದಿನಗಳಲ್ಲಿಯೇ ಇಲಾಖೆಯ ಸಚಿವರು ಸಭೆ ಕರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT