ಶುಕ್ರವಾರ, ಮಾರ್ಚ್ 31, 2023
23 °C
ಕೋವಿಡ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ: ಸಂಸದ ಸಂಗಣ್ಣ ಹೇಳಿಕೆ

ಸೇಡಂ ಕಾರ್ಯ ಶ್ಲಾಘನೀಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ‘ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಸುಧಾರಣೆಗೆ ಶ್ರಮಿಸುತ್ತಿರುವ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸಂಸ್ಥಾಪಕ ಬಸವರಾಜ ಸೇಡಂ ಅವರ ಕಾರ್ಯ ಶ್ಲಾಘನೀಯ’ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ಕಲಬುರ್ಗಿಯ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವು ಅಳವಂಡಿಯ ವಿನೂತನ ಶಿಕ್ಷಣ ಸಂಸ್ಥೆ, ಯಲಬುರ್ಗಾ ಹಾಗೂ ಕುಕನೂರಿನ ವಿಕಾಸ ಅಕಾಡೆಮಿ ಸಹಯೋಗದಲ್ಲಿ ಸ್ಥಳೀಯ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕೋವಿಡ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಪ್ರದೇಶದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಹಾಗೂ ತಮ್ಮದೇ ಆದ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಮಾನವ ಸಂಪನ್ಮೂಲ ಸಂಸ್ಥೆಗೆ ಸರ್ಕಾರ ಐದು ಕೋಟಿ ಅನುದಾನ ಮೀಸಲಿರಿಸಿದೆ. ಸೇಡಂ ಅವರ ಪ್ರಾಮಾಣಿಕತೆ, ಅಭಿವೃದ್ಧಿ ಪರಿಕಲ್ಪನೆ ಹಾಗೂ ಮಾದರಿ ವ್ಯಕ್ತಿತ್ವವನ್ನು ಸರ್ಕಾರ ಗಮನಿಸಿ, ಅವರಿಗೆ ಸಂಸ್ಥೆಯ ಉಸ್ತುವಾರಿ ವಹಿಸಿದೆ ಎಂದು ಅಭಿಪ್ರಾಯಪಟ್ಟರು.

ಶಾಸಕ ಹಾಲಪ್ಪ ಆಚಾರ ಮಾತನಾಡಿ,‘ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಇದು ಪರ್ವಕಾಲ. ವಿವಿಧ ಸಂಸ್ಥೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಭಾಗದ ಯುವತಿಯರಿಗೆ ಸಂಸ್ಥೆ ವತಿಯಿಂದ ಹೊಲಿಗೆ ಯಂತ್ರ ಮತ್ತು ಯುಪಿಎಸ್ ಸಾಮಗ್ರಿ ವಿತರಿಸಲಾಗುತ್ತಿದೆ’ ಎಂದರು.

ಸಂಘದ ಸದಸ್ಯ ಪ್ರಭುರಾಜ ಕಲಬುರ್ಗಿ ಮಾತನಾಡಿದರು.

ಪ.ಪಂ. ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ವಸಂತಕುಮಾರ ಭಾವಿಮನಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ್‍ ಪಾಟೀಲ, ವೀರಣ್ಣ ಹುಬ್ಬಳ್ಳಿ, ಸಿದ್ದರಾಮೇಶ ಬೇಲೇರಿ, ಸುಧಾಕರ ದೇಸಾಯಿ, ರುದ್ರಪ್ಪ ನಡುಲಮನಿ, ಎಸ್.ಎನ್.ಶ್ಯಾಗೋಟಿ, ಸಿದ್ದಲಿಂಗಯ್ಯ ಹಿರೇಮಠ, ಡಾ. ಕವಿತಾ ಹಿರೇಮಠ, ವ್ಹಿ.ಎಂ.ಭೂಸನೂರಮಠ, ಸಿದ್ದು ಉಳ್ಳಾಗಡ್ಡಿ, ಭೀಮಣ್ಣ ಹವಳಿ, ಶಿವಪ್ಪ ವಾದಿ ಹಾಗೂ ಪಿಎಸ್‍ಐ ಶಿವಕುಮಾರ ಮುಗ್ಗಳ್ಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು