ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರಿ ಕಳವು; ನಾಲ್ವರ ಬಂಧನ

Last Updated 18 ಸೆಪ್ಟೆಂಬರ್ 2021, 3:57 IST
ಅಕ್ಷರ ಗಾತ್ರ

ಯಲಬುರ್ಗಾ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕುರಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ವಿವಿಧ ಗ್ರಾಮಗಳಲ್ಲಿ ಕುರಿ ಕಳ್ಳತನವಾಗುತ್ತಿರುವ ಕುರಿತು ದೂರುಗಳು ಬಂದಿದ್ದವು.

ಈ ಕುರಿತು ಸ್ಥಳೀಯ ಪಿಎಸ್‍ಐ ಶಿವಕುಮಾರ ಮುಗ್ಗಳ್ಳಿ ನೇತೃತ್ವದ ಪೊಲೀಸರ ತಂಡ ನಿಗಾವಹಿಸಿದ್ದರಿಂದ ಗುರುವಾರ ಕುದ್ರಿಕೊಟಗಿ ಗ್ರಾಮದ ಹೊರವಲಯದಲ್ಲಿ ಕಳ್ಳತನ ಮಾಡುವ ಸಂದರ್ಭದಲ್ಲಿ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು
ಯಶಸ್ವಿಯಾಗಿದ್ದಾರೆ.

ವಿಜಯನಗರ ಜಿಲ್ಲೆಯ ಬಸಾಪೂರು ತಾಂಡಾದ ಕುಬೇರ ನಾಯಕ, ಕೃಷ್ಣ ನಾಯಕ, ಕುಮಾರ ನಾಯಕ ಹಾಗೂ ಸಂತೊಷ ನಾಯಕ ಎನ್ನುವವರನ್ನು ಬಂಧಿಸಲಾಗಿದೆ.

ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT