ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 13 ಕೋವಿಡ್‌ ಸೋಂಕು ದೃಢ

Last Updated 1 ಜುಲೈ 2020, 14:13 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯಲ್ಲಿ ಬುಧವಾರ ಒಬ್ಬರು ಕೊರೊನಾ ವಾರಿಯರ್ ಸೇರಿದಂತೆ 13 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.

ಗಂಗಾವತಿ ತಾಲ್ಲೂಕಿನಲ್ಲಿ ಒಟ್ಟು 8 ಜನರಲ್ಲಿ ಸೋಂಕು ದೃಢಪಟ್ಟಿವೆ. ಗಂಗಾವತಿಯ 10 ವರ್ಷ ಮತ್ತು 7 ವರ್ಷದ ಬಾಲಕಿಯರಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಪಿ-9810 ನ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. ವೆಂಕಟಗಿರಿಯ 45 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ವೆಂಕಟಾಪುರಕ್ಕೆ ಪ್ರಯಾಣ ಬೆಳೆಸಿದ್ದರು. ಶೀತಜ್ವರದ(ಐಎಲ್‌ಐ) ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಗಂಗಾವತಿಯ 23 ವರ್ಷದ ಮಹಿಳೆ ಮತ್ತು 23 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದ್ದು, ಶೀತಜ್ವರದ (ಐಎಲ್‌ಐ) ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ಗಂಗಾವತಿಯ 48 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಗಂಗಾವತಿಯ ಮರಳಿ ಗ್ರಾಮದ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಯರಡೋಣಿಯ 34 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಶೀತಜ್ವರದ (ಐಎಲ್‌ಐ) ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಚಿಕ್ಕಜಂತಕಲ್‌ನ 18 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಜೂಲೈ 26 ರಂದು ಬೆಂಗಳೂರಿನಿಂದ ಆಗಮಿಸಿದ್ದರು. ಶೀತಜ್ವರದ (ಐಎಲ್‌ಐ) ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ಕುಷ್ಟಗಿ ತಾಲ್ಲೂಕಿನ ದೊಣ್ಣೆಗುಡ್ಡದಲ್ಲಿ 12 ವರ್ಷದ ಇಬ್ಬರು ಬಾಲಕರು ಮತ್ತು 41 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರೆಲ್ಲರೂ ಪಿ-10,987 ನ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ.ಕೊಪ್ಪಳದ 49 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರಲ್ಲಿ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಕಂಡುಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ತಾಲ್ಲೂಕಿನ ಮುನಿರಾಬಾದ್‌ ಗ್ರಾಮದ ಕೊರೊನಾ ವಾರಿಯರ್ 34 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆದಿದೆ.ಈ 13 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 97 ಕ್ಕೇರಿದೆ. ಇದರಲ್ಲಿ 27 ಜನರನ್ನು ಈಗಾಗಲೇ ಚಿಕಿತ್ಸೆ ನೀಡಿ, ಗುಣಮುಖರಾದ ನಂತರ ಬಿಡುಗಡೆ ಮಾಡಲಾಗಿದೆ. ಒಂದು ಮರಣ ಪ್ರಕರಣ ದಾಖಲಾಗಿದ್ದು, 70 ಸಕ್ರೀಯ ಪ್ರಕರಣಗಳು ಜಿಲ್ಲೆಯಲ್ಲಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT