ಕುಷ್ಟಗಿ: ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ವಿಷಯವಾಗಿ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ನಡೆದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಂಜುನಾಥ್ ಉದ್ಘಾಟಿಸಿ, ‘ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಅವರದ್ದೇ ಆದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಇರುತ್ತವೆ. ಅವುಗಳನ್ನು ಪಡೆಯುವುದು ಮತ್ತು ನಿರ್ವಹಿಸುವ ಸಂದರ್ಭದಲ್ಲಿ ಎದುರಾಗುವ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಮಾಹಿತಿ ಹೊಂದುವ ಅಗತ್ಯವಿದೆ’ ಎಂದರು.

‘ಯಾರದಾರೂ ಹಕ್ಕುಗಳಿಗೆ ಚ್ಯುತಿಯಾದರೆ ಅದರ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮೂಲಕ ಪರಿಹಾರ ಪಡೆಯಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ಸಾರ್ವಜನಿಕರು, ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ಹೇಳಿದರು.

ಸಬ್ ಇನ್‌ಸ್ಪೆಕ್ಟರ್ ಮಾನಪ್ಪ ವಾಲ್ಮೀಕಿ, ಕಾನೂನಿ ನಿಯಮ ಪಾಲನೆಯಲ್ಲಿ ಸಾರ್ವಜನಿಕರಲ್ಲಿ ಇರಬೇಕಾದ ಅರಿವು ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಚಾರ್ಯ ವೈ.ಬಿ.ಶಿವಪ್ಪ ಕಾರ್ಯಕ್ರಮ ಕುರಿತು ಮಾತನಾಡಿದರು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಜಿ.ಪಾಟೀಲ, ಸರ್ಕಾರಿ ವಕೀಲ ಎಲ್.ರಾಯನಗೌಡ, ವಕೀಲರದ ಪರಸಪ್ಪ ಗುಜಮಾಗಡಿ, ಆನಂದ್ ಡೊಳ್ಳಿನ, ಗೋಪಾಲರಾವ್, ಶರಣಪ್ಪ ಕಡಪ್ಪನವರ ನಿರೂಪಿಸಿದರು. ಶಿಕ್ಷಕ ಸುಭಾಸ ನಿಡಸನೂರ ವಂದಿಸಿದರು. ಉಪನ್ಯಾಸಕರು, ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.