ಕೊಪ್ಪಳ: ತಾಲ್ಲೂಕಿನ ಹೊಸಳ್ಳಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಹುಲಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರು ಯಲಬುರ್ಗಾ ತಾಲ್ಲೂಕಿನ ಕರಮುಡಿ ಗ್ರಾಮಕ್ಕೆ ವಾಪಸ್ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ಜರುಗಿದೆ.

ಶಿವಪ್ಪ ಹೊಸಮನಿ ಎನ್ನುವವರು ಸಂಬಂಧಿಕರನ್ನು ಹುಲಿಗಿಗೆ ಕರೆದುಕೊಂಡು ಹೋಗಿದ್ದರು. ಹರಕೆ ತೀರಿಸಿ ವಾಪಸ್ ಬರುವಾಗ ಈ ಘಟನೆ ನಡೆದಿದ್ದು ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60) ಮತ್ತು ದುರುಗಮ್ಮ ಹನುಮಪ್ಪ (65) ಮೃತಪಟ್ಟಿದ್ದಾರೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲಿ ಮೃತಪಟ್ಟರು. ಕೆಲವರು ಗಂಭೀರವಾಗಿ ಮತ್ತು ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಗೊತ್ತಾಗಿದೆ. ಗಾಯಗೊಂಡವರನ್ನು ತಡರಾತ್ರಿಯ ತನಕ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.