ಅಳವಂಡಿ: ‘ತಂಬಾಕು ಸೇವನೆಯಿಂದ ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಮಹಿಳೆಯರು ತಂಬಾಕು ಸೇವನೆ ಮಾಡುವುದರಿಂದ ಹುಟ್ಟುವ ಮಗು ಕೂಡ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು’ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಸಾಮಾಜಿಕ ಮೇಲ್ವಿಚಾರಕಿ ಸರಸ್ವತಿ ಹೇಳಿದರು.

ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಂಬಾಕು ಮುಕ್ತ ಅಭಿಯಾನ ಅಂಗವಾಗಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಕ ಮರ್ದಾನಲಿ ಗಡಾದ ಮಾತನಾಡಿ, ‘ಸದೃಢ ಸಮಾಜ ಕಟ್ಟುವಲ್ಲಿ ಯುವಕರ ಪಾತ್ರ ಅತಿ ಮುಖ್ಯ. ಆದರೆ ಇಂದಿನ ಯುವಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಧೂಮಪಾನ, ಮದ್ಯಪಾನಂತಹ ದುಶ್ಚಟಗಳ ದಾಸರಾಗಿ ತಮ್ಮ ಸುಂದರ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

ಶಿಕ್ಷಕ ಗಿರಿಯಪ್ಪ ಹಾರನಹಳ್ಳಿ ಮಾತನಾಡಿದರು. ಶಿಕ್ಷಕರಾದ ರವಿಕಿರಣ್ ಟಿಕಾರೆ, ಪ್ರಕಾಶರೆಡ್ಡಿ ಗೋವಿಂದರೆಡ್ಡಿ, ಶಾಂತಂವೀರಯ್ಯ ಕಳ್ಳಿಮಠ, ಸೋಮಣ್ಣ ತಳಕಲ್ ಪರಶುರಾಮ ಯಡವಟ್ಟಿ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.