ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ ₹143 ಕೋಟಿ ಅನುದಾನ: ಸಚಿವ ಆನಂದ್ ಸಿಂಗ್

ಕಲ್ಯಾಣ ಕರ್ನಾಟಕ ಉತ್ಸವ
Last Updated 17 ಸೆಪ್ಟೆಂಬರ್ 2022, 4:51 IST
ಅಕ್ಷರ ಗಾತ್ರ

ಕೊಪ್ಪಳ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ ಒಟ್ಟು ₹143.54 ಕೋಟಿ ಅನುದಾನ ನಿಗದಿ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಇಲ್ಲಿನ ಜಿಲ್ಲಾ ಮೈದಾನದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ₹ 40 ಕೋಟಿ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ₹40 ಕೋಟಿ, ಕುಕನೂರು-ಯಲಬುರ್ಗಾ ಬೈಪಾಸ್ ‌ನಿರ್ಮಾಣಕ್ಕಾಗಿ ₹48.52 ಕೋಟಿ ನಿಗದಿ ಪಡಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಅರುಣಾಂಕ್ಶು ಗಿರಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT