ಭಾನುವಾರ, ಮೇ 29, 2022
23 °C

ಪಕ್ಷಾತೀತವಾಗಿ ಕೆಲಸ ಮಾಡಿ: ಮಹ್ಮದ್‌ ರಫೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ‘ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷಾತೀತವಾಗಿ ಕೆಲಸ ಮಾಡಬೇಕು’ ಎಂದು ತಾ.ಪಂ. ಅಧ್ಯಕ್ಷ ಮಹ್ಮದ್‌ ರಫೀ ಅವರು ಸಲಹೆ ನೀಡಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯ ಮಂಥನ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸದಸ್ಯರು ತರಬೇತಿಗಳಲ್ಲಿ ಪಾಲ್ಗೊಳ್ಳಬೇಕು. ‌ಸಂಪನ್ಮೂಲ ವ್ಯಕ್ತಿಗಳು ಗ್ರಾ.ಪಂ. ಯೋಜನೆಗಳ ಕುರಿತು ಮಾಹಿತಿ ನೀಡಲಿದ್ದಾರೆ’ ಎಂದರು.

ನಂತರ ತಾ.ಪಂ ಇಒ ಡಾ.ಡಿ.ಮೋಹನ್‌ ಮಾತನಾಡಿ,‘ರಾಜ್ಯದಾದ್ಯಂತ ಗ್ರಾ.ಪಂ. ಸದಸ್ಯರಿಗೆ ತರಬೇತಿ ಕಾರ್ಯಗಾರ ನಡೆಯುತ್ತಿದೆ. ಗಂಗಾವತಿಯಲ್ಲಿ ಮೂರು ತಾಲ್ಲೂಕುಗಳ ಗ್ರಾ.ಪಂ. ಸದಸ್ಯರಿಗೆ ತರಬೇತಿ ನೀಡಲಾಗುತ್ತಿದೆ. ಇಂದು ಆನೆಗೊಂದಿ, ಬಸಾಪಟ್ಟಣ, ಸಂಗಾಪುರ, ಚಿಕ್ಕಬೆಣಕಲ್‌, ಆಗೋಲಿಯ ಒಟ್ಟು 80 ನೂತನ ಸದಸ್ಯರು ತರಬೇತಿ ಪಡೆಯುತ್ತಿದ್ದಾರೆ’ ಎಂದು ಹೇಳಿದರು.

ಐದು ಗ್ರಾಮ ಪಂಚಾಯಿತಿಯ ನೂತನ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು