ಶುಕ್ರವಾರ, ಏಪ್ರಿಲ್ 23, 2021
31 °C

ಖಾಸಗಿ ವಾಹನಗಳ ಮೊರೆ ಹೋದ ಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬುಧವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ ಕಾರಣ ಪಟ್ಟಣದ ಬಸ್‌ ನಿಲ್ದಾಣ ಜನರಿಲ್ಲದೆ ಬಿಕೋ ಎನ್ನುತ್ತಿತ್ತು.

ಜನ ದುಪ್ಪಟ್ಟು ದರ ನೀಡಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಸಿದರು.

ತಾವರಗೇರಾ ಪಟ್ಟಣದಿಂದ ಮುದಗಲ್‌, ಲಿಂಗಸುಗೂರು, ಸಿಂಧನೂರು, ಮಸ್ಕಿ, ಕುಷ್ಟಗಿ, ಗಂಗಾವತಿ, ಕನಕಗಿರಿ ಸೇರಿ ವಿವಿಧ ಕಡೆ ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ತೆರಳಿದರು.

ಮುಷ್ಕರದ ಕುರಿತು ಮಾಹಿತಿ ಇಲ್ಲದ ಕಾರಣ ಗ್ರಾಮೀಣ ಭಾಗದ ಜನ ಪರದಾಡಿದರು.

ಬಸ್ ನಿಲ್ದಾಣದಲ್ಲಿ ಅಂಗಡಿ–ಮುಂಗಟ್ಟುಗಳ ಕಡೆ ಗ್ರಾಹಕರು ಸುಳಿಯಲಿಲ್ಲ.

‘ವ್ಯಾಪಾರ ಎಂದಿನಂತಿಲ್ಲದ ಕಾರಣ ನಷ್ಟವಾಗಿದೆ’ ಎಂದು ವ್ಯಾಪಾರಿ ಲಕ್ಷ್ಮಣಗೌಡ ಪುಂಡಗೌಡ್ರು ತಿಳಿಸಿದರು.

‘ನಾವು ಬಂದ್ ಕಾರಣ ದರ ಹೆಚ್ಚಳ ಮಾಡುವುದಿಲ್ಲ. ಸಾಮಾನ್ಯ ದಿನಗಳಲ್ಲಿ ಇದ್ದ ದರವನ್ನೇ ಪಡೆಯುತಿದ್ದೇವೆ’ ಎಂದು ಖಾಸಗಿ ವಾಹನ ಚಾಲಕ ವಿರೇಶ ಮನ್ನಾಪೂರ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು