ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ

ಮಕ್ಕಳ ಹಕ್ಕುಗಳ ರಕ್ಷಣೆ ಕರ್ತವ್ಯ: ನ್ಯಾಯಾಧೀಶ ದೇವೇಂದ್ರ ಪಂಡಿತ್ ಅಭಿಮತ
Last Updated 19 ಸೆಪ್ಟೆಂಬರ್ 2021, 4:55 IST
ಅಕ್ಷರ ಗಾತ್ರ

ಕೊಪ್ಪಳ: ಬಡತನ ಕಾರಣಕ್ಕೆ ಅಪ್ರಾಪ್ತ ಮಕ್ಕಳನ್ನು ದುಡಿಯಲು ಕಳುಹಿಸಿ, ಬಾಲ ಕಾರ್ಮಿಕ ಪದ್ಧತಿಗೆ ದೂಡಬೇಡಿ. ಅವರ ಬಾಲ್ಯವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೊಪ್ಪಳದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ ಹೇಳಿದರು.

ಶನಿವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಸಹಯೋಗದಲ್ಲಿ ನಡೆದ ‘ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನ’ ಕುರಿತ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಕರು ಬಡವರು ಎನ್ನುವ ಕಾರಣ ಕೊಟ್ಟು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡುತ್ತಿದ್ದಾರೆ. ಇಂತಹ ಕಾರಣ ಹೇಳುವ ತಂದೆ ತಾಯಿಗಳಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಆರ್ಥಿಕ ಕಾರಣಕ್ಕಾಗಿ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡುವ ಬದಲು ಮಕ್ಕಳ ಬಾಲ್ಯವನ್ನು ರಕ್ಷಿಸುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅನುಷ್ಠಾನದ ಕುರಿತು ಪುನಶ್ಚೇತನ ಕಾರ್ಯಕ್ರಮದ ಉದ್ದೇಶಈ ಎಲ್ಲಾ ಕಾಯ್ದೆ ಮತ್ತು ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅಷ್ಟೇ ಅಲ್ಲದೆ ತಾಲ್ಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಿಗೂ ಮಾಹಿತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಆಗಿದೆ ಎಂದರು.

ಗ್ರಾಮಗಳಲ್ಲಿ 18 ವರ್ಷದ ಕೆಳಗಿನ ಹೆಣ್ಣು ಮಕ್ಕಳ ಬಗ್ಗೆ ಇಲಾಖೆಯಿಂದ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು. ಬಾಲ್ಯ ವಿವಾಹದ ಸಾಧ್ಯತೆ ಅರಿತು, ಸರಿಯಾದ ಸಮಯದಲ್ಲಿ ಬಾಲ್ಯ ವಿವಾಹ ತಡೆಗಟ್ಟಬಹುದು. ಬಾಲ್ಯ ವಿವಾಹಕ್ಕೆ ಒಳಗಾಗುವ ಹೆಣ್ಣುಮಗುವಿನ ಜೊತೆ ಮಾತನಾಡಿ ಅವರಿಗೆ ಶಿಕ್ಷಣದ ಬಗ್ಗೆ ಒಲವು ಮೂಡಿಸಬೇಕುಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಯುನಿಸೆಫ್- ಮಕ್ಕಳ ರಕ್ಷಣಾ ಯೋಜನೆಯ ಜಿಲ್ಲಾ ವಿಭಾಗೀಯ ಸಂಯೋಜಕ ಹರೀಶ ಜೋಗಿ ಬಾಲ ಕಾರ್ಮಿಕ ಪದ್ಧತಿ ನಿಷೇಧ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿಯಂತ್ರಣ ಕಾಯ್ದೆ-1986ರ ಹಾಗೂ ರಾಘವೇಂದ್ರ ಭಟ್ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ ಕಾಯ್ದೆ-2016, ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ರ ಬಗ್ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT