ಮುನಿರಾಬಾದ್ (ಕೊಪ್ಪಳ): ತುಂಗಭದ್ರಾ ಆಣೆಕಟ್ಟೆಯ 19ನೇ ಗೇಟ್ ಲಿಂಕ್ ಮುರಿದು ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಎರಡು ವರ್ಷಗಳ ಬಳಿಕ ಆಣೆಕಟ್ಟು ಭರ್ತಿಯಾಗಿರುವ ಕಾರಣ ವಾರಾಂತ್ಯದ ದಿನಗಳಲ್ಲಿ ತಂಡೋಪ ತಂಡವಾಗಿ ಜನ ಪ್ರತಿವಾರವೂ ಬರುತ್ತಿದ್ದರು. ಸೆಲ್ಪಿ ತೆಗೆದುಕೊಂಡು ಖುಷಿಪಡುತ್ತಿದ್ದರು. ಆದ್ದರಿಂದ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಸೇತುವೆ ಮೇಲೆ ಅತಿ ಗಣ್ಯವ್ಯಕ್ತಿಗಳು ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ನಿರ್ಬಂಧ ಹೇರಲಾಗಿದೆ.