ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಮುಸ್ಲಿಂ ವೃದ್ಧನಿಗೆ ಜೈ ಶ್ರೀರಾಮ್ ಹೇಳಲು ಒತ್ತಡದ ಆರೋಪ: ಇಬ್ಬರ ಬಂಧನ

Published 6 ಡಿಸೆಂಬರ್ 2023, 7:29 IST
Last Updated 6 ಡಿಸೆಂಬರ್ 2023, 7:29 IST
ಅಕ್ಷರ ಗಾತ್ರ

ಕೊಪ್ಪಳ: ಗಂಗಾವತಿ ನಗರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ ಮನೆಗೆ ಹೋಗುವಾಗ ಕೆಲವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮೆಹೆಬೂಬ್ ನಗರದ ಹುಸೇನಸಾಬ್ ಎಂಬ ಮುಸ್ಲಿಂ ವೃದ್ದನ ದೂರಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಗಂಗಾವತಿಯ ಕುವೆಂಪು ಬಡಾವಣೆಯ ಸಾಫ್ಟ್‌ವೇರ್ ಎಂಜಿನಿಯರ್ ಸಾಗರ ಶೆಟ್ಟಿ ಕಲ್ಕಿ ಹಾಗೂ ಕಲ್ಲಪ್ಪನ ಕ್ಯಾಂಪ್‌ನ ನರಸಪ್ಪ ದನಕಾಯರ ಬಂಧಿತರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಇದುವರೆಗೆ ಎಲ್ಲ ಆಯಾಮಗಳಿಂದ ತನಿಖೆ ಮಾಡಲಾಗಿದೆ. ವೃದ್ಧನಿಗೆ ಜೈ ಶ್ರೀರಾಮ್ ಹೇಳುವಂತೆ ಒತ್ತಡ ಹೇರಲಾಗಿದೆ ಎನ್ನುವ ಆರೋಪಕ್ಕೆ ಯಾವುದೆ ಆಧಾರ ಲಭಿಸಿಲ್ಲ. ಹುಸೇನಸಾಬ್ ಗಡ್ಡಕ್ಕೆ ಬೆಂಕಿ ಹಚ್ಚಲಾಗಿತ್ತು ಎನ್ನುವುದಕ್ಕೂ ದಾಖಲೆ ಲಭಿಸಿಲ್ಲ ಎಂದು ತಿಳಿಸಿದರು.

ಪಾನಮತ್ತರಾಗಿದ್ದ ಆರೋಪಿಗಳಿಗೆ ವೃದ್ಧ ಡ್ರಾಪ್ ನೀಡುವಂತೆ ಕೇಳಿಕೊಂಡಿದ್ದ. ಅವರು ಬೈಕ್ ಮೇಲೆ ಕೂಡಿಸಿಕೊಂಡು ಹೋಗುವಾಗ ಮಧ್ಯದಲ್ಲಿ ಕುಳಿತಿದ್ದ ನರಸಪ್ಪ ವೃದ್ಧನ ಟೋಪಿ ಜಗ್ಗಿದ್ದಾನೆ. ಇದಕ್ಕೆ ವೃದ್ಧ ಕೋಪಗೊಂಡಿದ್ದರಿಂದ ಬುದ್ದಿ ಕಲಿಸಬೇಕು ಎಂದು ಯುವಕರು ರೈಲ್ವೆ ಸೇತುವೆ ಬಳಿ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ ಎಂದರು.

ಘಟನೆ ಹಿನ್ನಲೆ: ವೃದ್ಧ ಕೆಲಸದ‌ ನಿಮಿತ್ತ ಹೊಸಪೇಟೆಗೆ ಹೋಗಿ ನ. 25ರಂದು ಮಧ್ಯರಾತ್ರಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೊ ನಿಲ್ದಾಣದ ಬಳಿ ಕಾಯುತ್ತಿದ್ದೆ. ಆಗ ಬೈಕ್ ಮೇಲೆ ಬಂದ ಕೆಲವು ಯುವಕರು ಎಲ್ಲಿಗೆ ಹೋಗುತ್ತಿದ್ದಿಯಾ? ಎಂದು ಪ್ರಶ್ನಿಸಿದರು. ಬಲವಂತವಾಗಿ ಬೈಕ್ ಮೇಲೆ ಕೂಡಿಸಿಕೊಂಡು ಪಂಪಾನಗರ ಬಳಿ ಕರೆದುಕೊಂಡು ಹೋದರು ಎಂದು ದೂರಿನಲ್ಲಿ ತಿಳಿಸಿದ್ದರು.

ಮುಸ್ಲಿಂ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೊಲೆ ಬೆದರಿಕೆ ಒಡ್ಡಿದ್ದಾರೆ. ಸಿದ್ದಿಕೇರಿಗೆ ಹೋಗುವ ಮಾರ್ಗದಲ್ಲಿನ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ. ಗಡ್ಡಕ್ಕೆ ಬೆಂಕಿ ಹಂಚಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

ಘಟನೆ ಬಳಿಕ ವೃದ್ಧನಿಗೆ ನ್ಯಾಯ ಒದಗಿಸಬೇಕು, ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT