ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಬಾವಿಗೆ ಬಿದ್ದು ಇಬ್ಬರು ಮಕ್ಕಳ ಸಾವು

Published 30 ಮೇ 2024, 16:17 IST
Last Updated 30 ಮೇ 2024, 16:17 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಜಿನ್ನಾಪುರ ತಾಂಡಾದ ಹೊಲವೊಂದರಲ್ಲಿ ಆಟವಾಡಲು ತೆರಳಿದ್ದ ಇಬ್ಬರು ಮಕ್ಕಳು ಅಲ್ಲಿಯೇ ಇದ್ದ ಬಾವಿಯಲ್ಲಿ ಬಿದ್ದು ಜೀವ ಕಳೆದುಕೊಂಡಿದ್ದಾರೆ.

ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಘಟನೆ ನಡೆದಿದ್ದು, ಶಾಲೆಗೆ ರಜೆ ಇದ್ದ ಕಾರಣ ಆಡವಾಡಲು ಹೋಗಿದ್ದರು. ತಾಂಡಾದಲ್ಲಿ ಹೊಲದಲ್ಲಿಯೇ ಇವರ ಕುಟುಂಬದವರ ಮನೆ ಇದೆ. ಅಲ್ಲಿ ಆಟವಾಡುತ್ತಿದ್ದಾಗ ಆಯ ತಪ್ಪಿ ಬಾವಿಗೆ ಬಿದ್ದು ಸೌಂದರ್ಯ ರತ್ನಪ್ಪ ಪೂಜಾರ (11) ಹಾಗೂ ಲಕ್ಷ್ಮಿ ಶರಣಪ್ಪ ಪೂಜಾರ (10) ಮೃತಪಟ್ಟಿದ್ದಾರೆ. ಮೃತರು ಸಹೋದರ ಸಂಬಂಧಿಗಳ ಮಕ್ಕಳು.

ಈಜು ಬಾರದ ಮಕ್ಕಳು ನೀರಿನಲ್ಲಿ ಬಿದ್ದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ಹೊರತೆಗೆಯಲು ನೆರವಾದರು. ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT