ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರ ಸಾವು

Last Updated 3 ಜುಲೈ 2021, 13:38 IST
ಅಕ್ಷರ ಗಾತ್ರ

ಕನಕಗಿರಿ: ಕೃಷಿಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಸಮೀಪದ ವರ್ನಖೇಡ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಹುಲಿಹೈದರ ಗ್ರಾಮದ ಕವಿತಾ (11) ಹಾಗೂ ಆಗೋಲಿ ಗ್ರಾಮದ ಸಂಜನಾ (9) ಮೃತಪಟ್ಟವರು.

ಬಾಲಕಿಯರ ಪೋಷಕರು ಗ್ರಾಮದ ತೋಟದಲ್ಲಿ ಕೂಲಿಕಾರರಾಗಿ ಕೆಲಸ ಮಾಡುತ್ತಿದ್ದರು. ಶಾಲೆ ಇಲ್ಲದ ಕಾರಣ ಇಬ್ಬರು ಬಾಲಕಿಯರು ಪೋಷಕರ ಹತ್ತಿರ ಬಂದಿದ್ದರು. ಈ ವೇಳೆ ಸ್ನಾನ ಮಾಡಲು ತೆರಳಿದ್ದಾಗ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷಿಹೊಂಡದಿಂದ ಶವಗಳನ್ನು ತೆಗೆಯುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿತು. ಗಂಗಾವತಿ ಗ್ರಾಮೀಣ ವಿಭಾಗದ ಸಿಪಿಐ ಉದಯರವಿ ಹಾಗೂ ಪಿಎಸ್ಐ ತಾರಾಬಾಯಿ ಪವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT