ಕೊಪ್ಪಳ: ಗ್ರಂಥಾಲಯ ಹಾಗೂ ಅಂಗನವಾಡಿ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಲು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ದಿ ಆಯುಕ್ತೆ ಉಮಾ ಮಹಾದೇವನ್ ತಾಲ್ಲೂಕಿನ ಕಿನ್ನಾಳ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದರು. ಮಕ್ಕಳೊಂದಿಗೆ ಸಂವಾದ ನಡೆಸಿದರು.

ಕಿನ್ನಾಳದ ಅಂಗನವಾಡಿ ಕೇಂದ್ರ-3ಕ್ಕೆ ಭೇಟಿ ನೀಡಿ ಕಲಿಕಾ ಚಟುವಟಿಕೆ, ಮಕ್ಕಳಿಗೆ ವಿತರಿಸುವ ಆಹಾರ, ಓದು ಬರಹ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಕ್ಕಳಿಗೆ ಆಹಾರ ಮೆನುವಿನಂತೆ ಪ್ರತಿ ದಿನ ವಿತರಿಸುತ್ತಿದ್ದು, ಅವರಲ್ಲಿ ಓದಿನ ಕುರಿತು ಆಸಕ್ತಿ ಮೂಡಿಸಲು ಚಾರ್ಟ್ಗಳ ಮೂಲಕ, ಚಿತ್ರ ಬಿಡಿಸುವುದರ ಮೂಲಕ ಅವರಲ್ಲಿ ಓದು ಮತ್ತು ಬರಹದ ಕುರಿತು ಪ್ರೋತ್ಸಾಹಿಸಲಾಗುತ್ತಿದೆ ಎಂದು ಅಂಗನವಾಡಿ ಕಾರ್ಯಕರ್ತೆ ಗೀತಾ ವಿವರಿಸಿದರು.

ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿ ವಂತಿಕೆಯಿಂದ ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಕುರ್ಚಿ, ಟೇಬಲ್ ವಿತರಿಸಿರುವ ಕುರಿತು ಪಿಡಿಒ ಪರಮೇಶ್ವರಯ್ಯ ತೆಳಗಡೆಮಠ ಮಾಹಿತಿ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಟರಾಜ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ರೋಹಿಣಿ ಕೊಟಗಾರ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.