ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನುಮಸಾಗರ: ಮದ್ಯದ ಅಮಲಿನಲ್ಲಿ ವಿಷ ಕುಡಿದ ವ್ಯಕ್ತಿ ಸಾವು

Published 19 ಮಾರ್ಚ್ 2024, 15:01 IST
Last Updated 19 ಮಾರ್ಚ್ 2024, 15:01 IST
ಅಕ್ಷರ ಗಾತ್ರ

ಹನುಮಸಾಗರ: ಮದ್ಯದ ಅಮಲಿನಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಹಿರೇಗೊನ್ನಾಗರ ಗ್ರಾಮದ ಲಿಂಗರಾಜ್ ಜಿಗಳೂರು (38) ಎಂಬುವರು ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಆರು ವರ್ಷಗಳ ಹಿಂದೆ ಮದುವೆಯಾಗಿದ್ದು ಮಕ್ಕಳಾಗಿರಲಿಲ್ಲ. ಕಳೆದ 5 ವರ್ಷಗಳಿಂದ ವಿಪರೀತ ಕುಡಿತದ ಚಟಕ್ಕೆ ದಾಸನಾಗಿದ್ದ ಲಿಂಗರಾಜ್ ಮದ್ಯಪಾನ ಬಿಡುವಂತೆ ಎಷ್ಟೇ ತಿಳಿಹೇಳಿದರೂ ಮದ್ಯಸೇವನೆ ಮುಂದುವರಿಸಿದ್ದ. ಹಿರೇಗೊನ್ನಾಗರ ಸೀಮಾ ವ್ಯಾಪ್ತಿಯ ಜಮೀನಿನಲ್ಲಿ ಸೋಮವಾರ ಮದ್ಯದ ಅಮಲಿನಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ತವ್ಯಸ್ತನಾಗಿದ್ದ. ಇದನ್ನು ನೋಡಿದ ಗ್ರಾಮಸ್ಥರು ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

‘ನನ್ನ ಗಂಡನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಮೃತನ ಪತ್ನಿ ಲಕ್ಷ್ಮೀಬಾಯಿ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT