ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಸ್ವಾರ್ಥಕ್ಕೆ ಗಡಿ ವಿವಾದ ಬಳಕೆ: ಮುತಾಲಿಕ್‌

Last Updated 6 ಡಿಸೆಂಬರ್ 2022, 13:24 IST
ಅಕ್ಷರ ಗಾತ್ರ

ಕೊಪ್ಪಳ: ‘ಎರಡೂ ರಾಜ್ಯಗಳ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದವನ್ನು ಕೆದಕುತ್ತಿದ್ದಾರೆ’ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಟೀಕಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ ‘ಮಹಾರಾಷ್ಟ್ರದ ಬಿಜೆಪಿ ಅಲ್ಲಿನ ಮರಾಠಿಗರ ಪರವಾಗಿ, ಕರ್ನಾಟಕದ ಬಿಜೆಪಿ ಕನ್ನಡಿಗರ ಪರವಾಗಿದೆ. ಗಡಿ ಸಮಸ್ಯೆ ಸುಪ್ರೀಂ ಕೋರ್ಟ್‌ನಲ್ಲಿದೆ. ಅನಗತ್ಯವಾಗಿ ಇದನ್ನು ಕೆದಕಿ ಎರಡೂ ರಾಜ್ಯಗಳ ಎಲ್ಲ ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಳ್ಳುತ್ತಿವೆ’ ಎಂದರು.

‘ಕರ್ನಾಟಕ ಮತ್ತು ಮಹಾರಾಷ್ಟ್ರದ ಜನ ಸೌಹಾರ್ದವಾಗಿಯೇ ಇದ್ದಾರೆ. ನಮ್ಮ ರಾಜ್ಯದ ಕೆಲವರು ಮತ್ತು ಅಲ್ಲಿನ ಕಿಡಿಗೇಡಿಗಳು ಇದನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ನಮ್ಮ ರಾಜಕಾರಣಿಗಳಿಗೆ ಮರಾಠಿಗರ ಮತಬೇಕು. ಅವರಿಗೆ ಸ್ಪಷ್ಟವಾಗಿ ಕನ್ನಡಿಗರ ನಿಲ್ಲುವ ಗಟ್ಟಿತನ ಇಲ್ಲ. ಆದ್ದರಿಂದ ಜನರೇ ಎಚ್ಚೆತ್ತುಕೊಂಡು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಕಳುಹಿಸಬೇಕು. ಕಾನ್ವೆಂಟ್‌ ಶಾಲೆಗಳಿಂದ ದೂರವಿಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT